ADVERTISEMENT

ಕೊಳ್ಳೇಗಾಲ| ಮಹಿಳೆಯರಿಂದ ಯಶಸ್ವಿ ಕುಟುಂಬ ನಿರ್ವಹಣೆ: ಶಾಸಕ

​ಪ್ರಜಾವಾಣಿ ವಾರ್ತೆ
Published 20 ಜುಲೈ 2023, 14:19 IST
Last Updated 20 ಜುಲೈ 2023, 14:19 IST
ಕೊಳ್ಳೇಗಾಲ ನಗರದ ಸಿ ಡಿ ಎಸ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಲನೆ ನೀಡಿದರು
ಕೊಳ್ಳೇಗಾಲ ನಗರದ ಸಿ ಡಿ ಎಸ್ ಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಕಾರ್ಯಕ್ರಮಕ್ಕೆ ಶಾಸಕ ಎ.ಆರ್ ಕೃಷ್ಣಮೂರ್ತಿ ಚಾಲನೆ ನೀಡಿದರು   

ಕೊಳ್ಳೇಗಾಲ: ಕುಟುಂಬದ ಯಶಸ್ವಿ ನಿರ್ವಹಣೆಗೆ ಮಹಿಳೆಯರ ಪಾತ್ರ ಬಹಳ ಮುಖ್ಯ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.

ನಗರದಲ್ಲಿ ಗುರುವಾರ ನಡೆದ ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಮಹಿಳೆಯರ ಅನುಕೂಲಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದೆ.  ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು. ಮಹಿಳೆಯರು ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದೆ ಬರಬೇಕು. ಐದನೇ ಗ್ಯಾರಂಟಿಯನ್ನೂ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದರು.

ADVERTISEMENT

ಉಪ ವಿಭಾಗಾಧಿಕಾರಿ ಮಹೇಶ್ ಮಾತನಾಡಿ, ಮಹಿಳೆಯರು ಮನೆಯಲ್ಲಿದ್ದರೆ ಸಾಲದು.  ಎಲ್ಲಾ ಕ್ಷೇತ್ರಗಳಲ್ಲೂ ಪ್ರಗತಿ ಸಾಧಿಸಬೇಕು ಎಂದರು.

ನಗರಸಭಾ ಸದಸ್ಯ ಮಂಜುನಾಥ್, ಎಪಿ ಶಂಕರ್, ರಾಘವೇಂದ್ರ, ಶಾಂತರಾಜ, ಜಯರಾಜು, ಜಯಮರಿ, ಪುಷ್ಪಲತಾ, ಕವಿತಾ, ಸುಮಾ ಸುಬ್ಬಣ್ಣ, ಭಾಗ್ಯ, ಸುರೇಶ್, ತಹಶೀಲ್ದಾರ್ ಮಂಜುಳಾ, ಸಿಡಿಪಿಒ ನಂಜಮಣಿ, ನಗರಸಭೆ ಪೌರಾಯುಕ್ತ ರಾಜಣ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.