ADVERTISEMENT

ಮಹದೇಶ್ವರಬೆಟ್ಟದಿಂದ ಮೈಸೂರಿಗೆ ಹೋಗುತ್ತಿದ್ದ KSRTC ಬಸ್‌ ಪಲ್ಟಿ: ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2025, 16:06 IST
Last Updated 26 ಏಪ್ರಿಲ್ 2025, 16:06 IST
<div class="paragraphs"><p>ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವುದು</p></div>

ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಅಪಘಾತಕ್ಕೀಡಾಗಿರುವುದು

   

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರಬೆಟ್ಟದಿಂದ ಮೈಸೂರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿಯಾಗಿದ್ದು ಹಲವರಿಗೆ ಗಾಯಗಳಾಗಿವೆ.

ಬೆಟ್ಟದಿಂದ ಸುಮಾರು 6 ಕಿ.ಮೀ ದೂರದಲ್ಲಿರುವ ಶನಿಮಹಾತ್ಮನ ದೇವಾಲಯ ಸಮೀಪದ ಅಪಾಯಕಾರಿ ತಿರುವಿನಲ್ಲಿ ಬಸ್‌ ಪಲ್ಟಿಯಾಗಿದೆ. ಗಾಯಗೊಂಡಿರುವ 10 ಮಂದಿಯನ್ನು ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಜ್ಯೋತಿ, ಮೂರುವರೆ ವರ್ಷದ ಲಿಖಿತಾ, ರಾಜಮಣಿ,

ADVERTISEMENT

ಸಂಜು, ಮಂಜುನಾಥ್, ಮಹೇಶ್ ಅವರಿಗೆ ತೀವ್ರ ಪೆಟ್ಟಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಕೊಳ್ಳೇಗಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ಎಣ್ಣೆಮಜ್ಜನ ಸೇವೆಯಲ್ಲಿ ಭಾಗವಹಿಸಿದ್ದ ಭಕ್ತರು ವಾಪಸ್ ಹೋಗುವಾಗ ದುರ್ಘಟನೆ ಸಂಭವಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.