
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಚಾಮರಾಜನಗರ: ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿದ್ದಾರೆ.
ಮಲೆಯೂರು ಶಿವಸ್ವಾಮಿ (34) ಮೃತರು. ಗಾಯಗೊಂಡಿರುವ ನಾಗರಾಜು ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದ ತಿರುವಿನಲ್ಲಿ ಮುಕ್ಕಡಹಳ್ಳಿಗೆ ಹೋಗುವ ರಸ್ತೆಯಲ್ಲಿ ಬೆಳಿಗ್ಗೆ ಬಸ್ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್ ವಶಕ್ಕೆ ಪಡೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.