
ಹನೂರು: ಎಲ್ಲೆಮಾಳ ಬಳಿ ಶನಿವಾರ ಸಾರಿಗೆ ಸಂಸ್ಥೆಯ ಎರಡು ಬಸ್‌ಗಳು ಮುಖಮುಖಿ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಹದೇಶ್ವರ ಬೆಟ್ಟದಲ್ಲಿಯೂ ಈಚೆಗೆ ಬಸ್‌ಗಳ ಮುಖಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು.
ಶನಿವಾರ ಮೈಸೂರು ಡಿಪೋಗೆ ಸೇರಿದ ಬಸ್ ಮತ್ತು ಕೊಳ್ಳೇಗಾಲ ಡಿಪೋ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್‌ಗಳು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಕೆಲಕಾಲ ಪರದಾಡಿದರು.
ಹನೂರು ಪಟ್ಟಣದ ಹೊರವಲಯದಲ್ಲಿ ಶನಿವಾರ ಕೆಎಸ್ಆರ್‌ಟಿಸಿ ಬಸ್ ಬೈಕ್ ನಡುವಿನ ಅಪಘಾತದಲ್ಲಿ ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.
ಕನಕಪುರ ತಾಲ್ಲೂಕಿನ ಬಿಜ್ಜಳ್ಳಿ ಗ್ರಾಮದ ಪರಮೇಶ್ (45) ಮೃತರು. ಕಾಲ್ನಡಿಗೆಯ ಭಕ್ತರಿಗೆ ಟಾರ್ಪಲ್ ಮಾರಾಟಕ್ಕಾಗಿ ಮಹದೇಶ್ವರ ಬೆಟ್ಟದತ್ತ ಬಂದಿದ್ದ ಅವರು, ವ್ಯಾಪಾರ ಹಾಗೂ ಮಾದಪ್ಪನ ದರ್ಶನ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.