ADVERTISEMENT

ಕುಂಬಾರಗೊಂಡಿ ಕೆರೆ ತುಂಬಿಸಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 8:18 IST
Last Updated 23 ಫೆಬ್ರುವರಿ 2026, 8:18 IST
ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದಲ್ಲಿರುವ ಕುಂಬಾರಗುಂಡಿ ಕೆರೆಯು ಸಂಪೂರ್ಣ ಬತ್ತಿ ಹೋಗಿರುವುದು
ಚಾಮರಾಜನಗರ ತಾಲ್ಲೂಕಿನ ಹರವೆ ಗ್ರಾಮದಲ್ಲಿರುವ ಕುಂಬಾರಗುಂಡಿ ಕೆರೆಯು ಸಂಪೂರ್ಣ ಬತ್ತಿ ಹೋಗಿರುವುದು   

ಚಾಮರಾಜನಗರ: ತಾಲ್ಲೂಕಿನ ಹರವೆ ಗ್ರಾಮದಲ್ಲಿರುವ ಕುಂಬಾರಗುಂಡಿ ಕೆರೆಯು ಕಳೆದ ಎರಡು ಮೂರು ವರ್ಷಗಳಿಂದ ಮಳೆ ಕೊರತೆಯಿಂದ ಸಂಪೂರ್ಣ ಬತ್ತಿ ಹೋಗಿದ್ದು ಕೆರೆಗೆ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಒಂದೂವರೆ ಎಕರೆ ವಿಸ್ತೀರ್ಣದ ಕೆರೆ ಸುತ್ತಮುತ್ತಲಿನ ಗ್ರಾಮಗಳ ಜಾನುವಾರುಗಳು ನೀರು ಕುಡಿಯಲು ಪ್ರಮುಖ ಮೂಲವಾಗಿತ್ತು. ಕುಡಿಯುವ ಹಾಗೂ ಕೃಷಿ ಚಟುವಟಿಕೆಗಳಿಗೂ ಬಳಕೆಯಾಗುತ್ತಿತ್ತು. ಆದರೆ, ಕೆರೆ ಸಂಪೂರ್ಣವಾಗಿ ಬತ್ತಿರುವುದರಿಂದ ಸಮಸ್ಯೆಯಾಗಿದೆ. ಮಳೆಗಾಲದಲ್ಲಿ ಸಮರ್ಪಕ ಮಳೆಯಾಗದೆ ಕೆರೆಯಲ್ಲಿ ನೀರು ಇಲ್ಲದಾಗಿದೆ.

ಶಾಸಕರು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಕೆರೆ ತುಂಬಿಸಲು ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ಕೆರೆ ತುಂಬಿಸಲು ಮೀನ ಮೇಷ ಎಣಿಸುತ್ತಿದ್ದಾರೆ. ಜನ ಜಾನುವಾರುಗಳ ಹಿತದೃಷ್ಟಿಯಿಂದ ಪೈಪ್‌ಲೈನ್ ಮೂಲಕ ಕೆರೆಗೆ ನೀರು ತುಂಬಿಸಬೇಕು. ಇದರಿಂದ ಅಂತರ್ಜಲ ಮಟ್ಟ ಹೆಚ್ಚಾಗಿ ಬೋರ್‌ವೆಲ್‌ಗಳು ಮರುಪೂರಣಗೊಳ್ಳುತ್ತವೆ. ಕೃಷಿ ಚಟುವಟಿಕೆಗಳಿಗೂ ನೀರು ಸಿಗಲಿದೆ ಎಂದು ಗ್ರಾಮದ 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.