ADVERTISEMENT

ಚಾಮರಾಜನಗರ | ‘ಚಿಂತನೆಗೆ ಒಡ್ಡುವ ಕುವೆಂಪು ಬರಹ’

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 4:28 IST
Last Updated 11 ಜನವರಿ 2026, 4:28 IST
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಕುವೆಂಪು ಗೀತ ಗಾಯನ ಕಾರ್ಯಕ್ರಮ ನಡೆಯಿತು.
ಚಾಮರಾಜನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಕುವೆಂಪು ಗೀತ ಗಾಯನ ಕಾರ್ಯಕ್ರಮ ನಡೆಯಿತು.   

ಚಾಮರಾಜನಗರ: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಶ್ರಯದಲ್ಲಿ ವಿಶ್ವ ಮಾನವ ಕುವೆಂಪು ಅವರ ಜನ್ಮದಿನಾಚರಣೆ ಅಂಗವಾಗಿ ಸಾಹಿತ್ಯ ಪರಿಷತ್ತು ಸಭಾಂಗಣದಲ್ಲಿ ಕುವೆಂಪು ಗೀತ ಗಾಯನ ಕಾರ್ಯಕ್ರಮ ನಡೆಯಿತು.

ಕುವೆಂಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಾಹಿತಿ ಎಸ್‌.ಲಕ್ಷ್ಮೀ ನರಸಿಂಹ, ‘ವಿಶ್ವಕವಿಯಾಗಿರುವ ಕುವೆಂಪು ಅವರ ಸಾಹಿತ್ಯ ಸರ್ವಶ್ರೇಷ್ಠವಾಗಿದ್ದು ಸಾಮಾಜಿಕ, ಪರಿಸರ ಹಾಗೂ ಗಂಭೀರ ವಿಚಾರಗಳ ಕುರಿತು ಚಿಂತನೆಗೆ ಒಡ್ಡುತ್ತವೆ. ಇಂಗ್ಲಿಷ್ ಸಾಹಿತ್ಯ ರಚನೆಯಲ್ಲೂ ಕುವೆಂಪು ಅವರಿಗೆ ಅಪಾರ ಒಲವಿತ್ತು ಎಂದರು.

ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಸುರೇಶ್ ಎನ್.ಋಗ್ವೇದಿ ಮಾತನಾಡಿ, ಕುವೆಂಪು ಸಾಹಿತ್ಯದ ಮೇರು ಶಿಖರವಾಗಿದ್ದು ಅವರ ಬರಹಗಳಲ್ಲಿ ರಾಮಕೃಷ್ಣ ಪರಮಹಂಸರ ಚಿಂತನೆ ಹಾಗೂ ಪ್ರಭಾವ ಕಾಣಬಹುದು. ಆಧ್ಯಾತ್ಮಿಕತೆ, ಪರಿಸರ, ಸಾಮಾಜಿಕ ಮೌಲ್ಯಗಳನ್ನು ಸಾಹಿತ್ಯದ ಮೂಲಕ ಸಮಾಜಕ್ಕೆ ನೀಡಿದವರು ಕುವೆಂಪು ಎಂದರು.

ADVERTISEMENT

ಶಿಕ್ಷಕ ಯಳಂದೂರು ರಂಗನಾಥ್ ಕುವೆಂಪು ಕವಿತೆಗಳ ವಾಚಿಸಿದರು. ಗಾಯಕ ಸುರೇಶ್ ನಾಗ್ ಹರದನಹಳ್ಳಿ ಕುವೆಂಪು ರಚಿತ ಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.

ಕನ್ನಡ ಮಹಾಸಭಾ ಅಧ್ಯಕ್ಷ ಚಾರಂ ಶ್ರೀನಿವಾಸಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ.ಕೆ.ಆರಾಧ್ಯ, ಶಿವಲಿಂಗಮೂರ್ತಿ,  ರವಿಚಂದ್ರ ಪ್ರಸಾದ್, ಪದ್ಮ ಪುರುಷೋತ್ತಮ್, ಜಗದೀಶ್, ಪದ್ಮಾಕ್ಷಿ, ಉಪ್ಪಾರ ಸಂಘದ ಅಧ್ಯಕ್ಷ ಜಯಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.