ಸಂತೇಮರಹಳ್ಳಿ: ‘ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೆರೆಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಹೆಚ್ಚು ಆದ್ಯತೆ ನೀಡಲಾಗುತ್ತದೆ’ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.
ಸಮೀಪದ ಹೊಂಗನೂರು ಗ್ರಾಮದ ಹಿರಿಕೆರೆ ಅಭಿವೃದ್ಧಿ ಕಾಮಗಾರಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಇದರ ಜತೆಗೆ ಜಿಲ್ಲೆಯ ಕೆರೆಗಳ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಹ ಕೋಟ್ಯಂತರ ಅನುದಾನ ನೀಡಲು ಸೂಚಿಸಿದ್ದಾರೆ ಎಂದು ತಿಳಿಸಿದರು.
ಹಿರಿಕೆರೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ₹15 ಕೋಟಿ ಅನುದಾನ ನೀಡಲಾಗಿದೆ. ಈಗಾಗಲೇ ₹1 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆದಿದ್ದು, ಇದೀಗ ₹2 ಕೋಟಿ ಅನುದಾನದಲ್ಲಿ ಕೆರೆಯ ಚೆಕ್ ಡ್ಯಾಂ ನಿರ್ಮಾಣ ಸೇರಿದಂತೆ ನಾನಾ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಕೆರೆಯೂ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿಯಾದ ವೇಳೆಯಲ್ಲಿ ಈ ಭಾಗದ ರೈತರ ಜಮೀನುಗಳಿಗೆ ನೀರು ಪೂರ್ಣ ಪ್ರಮಾಣದಲ್ಲಿ ಹರಿಯುವ ಮೂಲಕ ರೈತರು ಉತ್ತಮ ಬೆಳೆ ಬೆಳೆಯಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯೋಗೀಶ್, ಗ್ರಾಮಪಂಚಾಯಿತಿ ಅಧ್ಯಕ್ಷೆ ರೂಪ ಮೋಹನ್, ಉಪಾಧ್ಯಕ್ಷ ನವೀನ್‌ಕುಮಾರ್, ಸದಸ್ಯರಾದ ಮಣಿಕಂಠ, ನಿರ್ಮಲ, ಚಾಮದಾಸ್, ಅಭಿವೃದ್ಧಿ ಅಧಿಕಾರಿ ರಾಮೇಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.