ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ಹೊರವಲಯದ ಮಂಗಳಮ್ಮನ ಗುಡ್ಡದ ಸಮೀಪದಲ್ಲಿ ಚಿರತೆ ದಾಳಿ ನಡೆಸಿ ಮೂರು ಮೇಕೆಗಳನ್ನು ಕೊಂದು ಹಾಕಿದೆ.
ಮಂಚಹಳ್ಳಿ ಗ್ರಾಮದಲ್ಲಿ ಭಾಗ್ಯಮ್ಮ ಎಂಬುವರಿಗೆ ಸೇರಿದ ಮೇಕೆಗಳು ಬಲಿಯಾಗಿವೆ. ಮೇಕೆಗಳನ್ನು ಮೇಯಿಸಿಕೊಂಡು ಮನೆಗೆ ವಾಪಾಸ್ ಬರುವಾಗ ಮೇಕೆ ಹಿಂಡಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಮೂರು ಮೇಕೆಗಳನ್ನು ಕೊಂದು ಅದರಲ್ಲಿ ಒಂದು ಮೇಕೆಯನ್ನು ಚಿರತೆ ಹೊತ್ತೊಯ್ದಿದೆ. ಮೇಕೆ ಸಾಕಾಣಿಕೆಯನ್ನೆ ನಂಬಿ ಜೀವನ ನಡೆಸುತ್ತಿರುವ ಮಹಿಳೆ ಭಾಗ್ಯಮ್ಮ ಅವರಿಗೆ ನಷ್ಟ ಆಗಿದೆ.
ಘಟನೆ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿದರೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮದ ಮುಖಂಡರು ದೂರಿದ್ದು, ಮೇಕೆ ಕಳೆದುಕೊಂಡಿರುವ ಭಾಗ್ಯಮ್ಮ ಅವರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.