ADVERTISEMENT

ಗುಂಡ್ಲುಪೇಟೆ: ಚಿರತೆ ದಾಳಿಗೆ ಹಸು ಬಲಿ

​ಪ್ರಜಾವಾಣಿ ವಾರ್ತೆ
Published 31 ಜನವರಿ 2025, 13:05 IST
Last Updated 31 ಜನವರಿ 2025, 13:05 IST
ಗುಂಡ್ಲುಪೇಟೆ ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ಜಮೀನಿನಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದಿರುವುದು.
ಗುಂಡ್ಲುಪೇಟೆ ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ಜಮೀನಿನಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದಿರುವುದು.   

ಗುಂಡ್ಲುಪೇಟೆ: ಜಮೀನಿನಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ತಾಲ್ಲೂಕಿನ ಲಕ್ಕೂರು ಗ್ರಾಮದಲ್ಲಿ ನಡೆದಿದೆ.

ಲಕ್ಕೂರು ಗ್ರಾಮದ ಬಸಪ್ಪ ಎಂಬುವವರಿಗೆ ಸೇರಿದ ಹಸು ಇದಾಗಿದ್ದು, ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ವೇಳೆ ಚಿರತೆ ದಾಳಿ ನಡೆಸಿ ಕೊಂದು ಹಾಕಿ, ಸ್ವಲ್ಪ ಮಾಂಸ ತಿಂದು ಪರಾರಿಯಾಗಿದೆ. ಹಸುವನ್ನು ಕಳೆದುಕೊಂಡ ರೈತ ಕಂಗಲಾಗಿದ್ದು, ಸೂಕ್ತ ಪರಿಹಾರ ಕೊಡಬೇಕೆಂದು ಸ್ಥಳೀಯ ಮುಖಂಡರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT