ADVERTISEMENT

ಮಾದಪ್ಪನ ದರ್ಶನಕ್ಕೆ ಹೊರಟಿದ್ದ ಭಕ್ತನ ಮೇಲೆ ಚಿರತೆ ದಾಳಿ; ಸಾವು

​ಪ್ರಜಾವಾಣಿ ವಾರ್ತೆ
Published 21 ಜನವರಿ 2026, 7:16 IST
Last Updated 21 ಜನವರಿ 2026, 7:16 IST
<div class="paragraphs"><p> ಚಿರತೆ</p></div>

ಚಿರತೆ

   

ಚಾಮರಾಜನಗರ: ಹನೂರು ತಾಲ್ಲೂಕಿನ ಪ್ರಸಿದ್ಧ ಯಾತ್ರಾಸ್ಥಳವಾದ ಮಲೆ ಮಹದೇಶ್ವರನ ದೇವಸ್ಥಾನಕ್ಕೆ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನ ಮೇಲೆ ಬುಧವಾರ ಬೆಳಿಗ್ಗೆ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ.

ಮಂಡ್ಯ ಜಿಲ್ಲೆಯ ಚೀರನಹಳ್ಳಿ ಗ್ರಾಮದ ಪ್ರವೀಣ್ ಮೃತರು.

ADVERTISEMENT

ಗ್ರಾಮದವರ ಜೊತೆ ಮಲೆ ಮಾದಪ್ಪನ ದರ್ಶನ ಮಾಡಲು ಬಂದಿದ್ದ ಪ್ರವೀಣ್ ತಾಳುಬೆಟ್ಟದಿಂದ ಮಲೆಮಹದೇಶ್ವರನ ಬೆಟ್ಟದವರೆಗೆ ಕಾಲ್ನಡಿಗೆಯಲ್ಲಿ ಹೋಗುವಾಗ ಚಿರತೆ ದಾಳಿ ನಡೆಸಿದೆ. ಕುತ್ತಿಗೆ ಹಾಗೂ ಮರ್ಮಾಂಗಕ್ಕೆ ಗಂಭೀರ ಪೆಟ್ಟಾಗಿದ್ದು ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ.

ಪ್ರವೀಣ್ ಅವರೊಂದಿಗಿದ್ದ ಇತರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುದ್ದಿ ತಿಳಿದ ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಯನ್ನು ಕಾಡಿನೊಳಗೆ ಓಡಿಸಿದ್ದಾರೆ.

ಮಲೆ ಮಹದೇಶ್ವರನ ದೇವಸ್ಥಾನದ ಸಮೀಪ ಚಿರತೆ ದಾಳಿ ನಡೆಸಿರುವುದು ಭಕ್ತರಲ್ಲಿ ಆತಂಕ ಮೂಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.