ಈಶ್ವರ್ ಖಂಡ್ರೆ
ಚಾಮರಾಜನಗರ: ‘ಜಿಲ್ಲೆಯ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ರಾಮಾಪುರ ಮಾರ್ಟಳ್ಳಿ ಗಡಿಯಲ್ಲಿ ಚಿರತೆ ಕಳೇಬರ ಪತ್ತೆಯಾಗಿದ್ದು, ಉಗುರುಗಳಿಗಾಗಿ ಹತ್ಯೆ ನಡೆದಿದೆ ಎಂಬ ಮಾಹಿತಿ ಇದೆ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಆದೇಶಿಸಿದ್ದಾರೆ.
‘ಹೂಗ್ಯಂ ವಲಯದಲ್ಲಿ 5 ಹುಲಿಗಳು ಅಸಹಜವಾಗಿ ಮೃತಪಟ್ಟ ದುರಂತ ಸಾರ್ವಜನಿಕವಾಗಿ ಚರ್ಚೆಗೆ ನಡೆದಿರುವ ಸಂದರ್ಭದಲ್ಲಿ 15 ದಿನದ ಹಿಂದೆ, ಕಾಲುಗಳನ್ನು ಕಡಿದ ಸ್ಥಿತಿಯಲ್ಲಿ ಚಿರತೆ ಕಳೇಬರ ಸಿಕ್ಕಿರುವ ಮಾಹಿತಿ ನಮ್ಮ ಕಚೇರಿಗೆ ಬಂದಿದೆ’ ಎಂದು ಹೇಳಿದ್ದಾರೆ.
ಎಪಿಸಿಸಿಎಫ್ ನೇತೃತ್ವದ ತಂಡದಿಂದ ತನಿಖೆ ನಡೆಸಲಿದೆ. ಚಿರತೆ ಹತ್ಯೆಯ ಪ್ರಕರಣದಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ಕಂಡುಬಂದರೆ ತೆಗೆದುಕೊಳ್ಳಬೇಕಾದ ಕ್ರಮಗಳ ಶಿಫಾರಸು ಸಹಿತ ಏಳು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸಚಿವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.