ಯಳಂದೂರು: ವೈದ್ಯಕೀಯ ಕ್ಷೇತ್ರದಲ್ಲಿ ಕುಷ್ಠ ರೋಗವನ್ನು ತಡೆಯುವ ಬಗ್ಗೆ ಸಂಶೋಧನೆಗಳು ನಡೆದಿದ್ದು, ಕುಷ್ಠ ಬಂದ ತಕ್ಷಣ ಆತಂಕ ಪಡದೆ ಆಸ್ಪತ್ರೆಗಳಲ್ಲಿ ಪರೀಕ್ಷಿಸಿಕೊಳ್ಳಬೇಕು ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ತನುಜಾ ಹೇಳಿದರು.
ತಾಲ್ಲೂಕಿನ ಮಲಾರಪಾಳ್ಯ ಗ್ರಾಮದಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ರಾಷ್ಟ್ರೀಯ ಕುಷ್ಠ ರೋಗ ನಿರ್ಮೂಲನಾ ಕಾರ್ಯಕ್ರಮ ಜಾಗೃತಿ ಅಭಿಯಾನದಲ್ಲಿ ಅವರು ಮಾತನಾಡಿದರು. ಕುಷ್ಠ ರೋಗವು ದೇವರ ಶಾಪ ಇಲ್ಲವೇ ಫಲಗಳಿಂದ ಬರುವುದಿಲ್ಲ. ಕುಷ್ಠ ರೋಗಿಗಳನ್ನು ತಾರತಮ್ಯದಿಂದ ಕಾಣಬೇಕಿಲ್ಲ. ನೋವು ಕಂಡುಬಂದರೆ ಅಂತಹ ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿ ಮುಖ್ಯ ವಾಹಿನಿಗೆ ತಂದು ಎಲ್ಲರೊಟ್ಟಿಗೆ ಬದಕಲು ಅವಕಾಶ ನೀಡಬಹುದು ಎಂದರು.
ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನದಂದು ಅವರ ಸ್ಮರಣೆಯಲ್ಲಿ ದೇಶದಾದ್ಯಂತ ‘ಸ್ಪರ್ಶ’ ಕುಷ್ಠರೋಗ ಅರಿವು ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತೆಯರು ಹಾಗೂ ಶಿಕ್ಷಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.