ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಸಿಡಿಲು ಬಡಿದು ಶಿವಲಿಂಗೇಗೌಡ ಅವರ ಮನೆ ಛಾವಣಿ ಕುಸಿದು, ವಿದ್ಯುತ್ ಪರಿಕರ ಹಾಗೂ ಮನೆ ಕೆಲವು ಸಾಮಾಗ್ರಿಗಳು ಸುಟ್ಟುಕರಕಲಾಗಿವೆ.
ಶುಕ್ರವಾರ ರಾತ್ರಿ ಘಟನೆ ನಡೆದಾಗ ಮನೆಯಲ್ಲಿ ಯಾರೂ ಇಲ್ಲದ ಪರಿಣಾಮ ಯಾವುದೇ ಪ್ರಾಣಾಪಾಯ ಇಲ್ಲ. ಸಿಡಿಲಿನ ರಭಸಕ್ಕೆ ಮನೆ ಗೋಡೆಗಳು ಸಂಪೂರ್ಣ ಬಿರುಕು ಬಿಟ್ಟಿದ್ದು ವೈರ್‌ಗಳು ಸುಟ್ಟು ಕರಕಲಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ ಪ್ರಕೃತಿ ವಿಕೋಪದಡಿ ಸೂಕ್ತ ಪರಿಕಾರ ನೀಡುವಂತೆ ಅವರು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.