ADVERTISEMENT

ಚಾಮರಾಜನಗರ ಜಿಲ್ಲೆಗೆ ಎಂ.ಮುತ್ತುರಾಜ್ ಹೊಸ ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 7:20 IST
Last Updated 1 ಜನವರಿ 2026, 7:20 IST
ಎಂ.ಮುತ್ತುರಾಜ್, ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಎಂ.ಮುತ್ತುರಾಜ್, ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ   

ಚಾಮರಾಜನಗರ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ಬಿ.ಟಿ.ಕವಿತಾ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಮುತ್ತುರಾಜ್ ಅವರನ್ನು ನೇಮಕ ಮಾಡಲಾಗಿದೆ.

ಬಿ.ಟಿ.ಕವಿತಾ ಜುಲೈ 3, 2024ರಲ್ಲಿ ಎಸ್‌ಪಿ ಆಗಿ ಅಧಿಕಾರ ಸ್ವೀಕರಿಸಿದ್ದರು. ಕವಿತಾ ಅವರನ್ನು ಬೆಂಗಳೂರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ನೂತನ ಎಸ್‌ಪಿ ಎಂ.ಮುತ್ತುರಾಜ್ ಬಿಎಂಟಿಎಫ್‌ ಎಸ್‌ಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಿಂದೆ ಜಿಲ್ಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿಯೂ ಕಾರ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT