ADVERTISEMENT

ಮಲೆ ಮಹದೇಶ್ವರನ ಬೆಟ್ಟ: ಮಾದಪ್ಪನ ದೀಪಾವಳಿ ಜಾತ್ರೆ ಆರಂಭ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2025, 22:33 IST
Last Updated 18 ಅಕ್ಟೋಬರ್ 2025, 22:33 IST
ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು
ಮಹದೇಶ್ವರ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು   

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರನ ಬೆಟ್ಟದಲ್ಲಿರುವ ಮಾದಪ್ಪನ ಸನ್ನಿಧಿಯಲ್ಲಿ ಶನಿವಾರ ದೀಪಾವಳಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಿತು.

ನಸುಕಿನಲ್ಲಿ ದೇವರಿಗೆ ವಿಶೇಷ ಪೂಜೆ, ಅಭಿಷೇಕ, ಎಣ್ಣೆಮಜ್ಜನ ಸೇವೆ ನೆರವೇರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು. ಐದು ದಿನಗಳ ಜಾತ್ರೆಯಲ್ಲಿ ನಾಡಿನ ಹಲವೆಡೆಗಳಿಂದ ಲಕ್ಷಾಂತರ ಭಕ್ತರು ಭಾಗವಹಿಸಲಿದ್ದಾರೆ. 21ರಂದು ಅಮಾವಾಸ್ಯೆಯ ಪ್ರಯುಕ್ತ ಹಾಲರುವೆ ಉತ್ಸವ, 22ರಂದು ಮಹದೇಶ್ವರ ಸ್ವಾಮಿಯ ಮಹಾ ರಥೋತ್ಸವ ಜರುಗಲಿದೆ. ಅಂದು ರಾತ್ರಿ ಅದ್ದೂರಿ ತೆಪ್ಪೋತ್ಸವದ ಮೂಲಕ ದೀಪಾವಳಿ ಜಾತ್ರೆಗೆ ತೆರೆ ಬೀಳಲಿದೆ.

ಕರ್ನಾಟಕ ಹಾಗೂ ತಮಿಳುನಾಡು ಸಾರಿಗೆ ಸಂಸ್ಥೆಗಳು ಮಾದಪ್ಪನ ಕ್ಷೇತ್ರಕ್ಕೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಿವೆ. ಭಕ್ತರಿಗೆ ನಿತ್ಯ ದಾಸೋಹದ ವ್ಯವಸ್ಥೆ ಮಾಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.