ಮಹದೇಶ್ವರ ಬೆಟ್ಟ: ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿಯ ಶಿವರಾತ್ರಿ ಜಾತ್ರೆಯ ರಥೋತ್ಸವ ಭಾನುವಾರ ವಿಜೃಂಭಣೆಯಿಂದ ನಡೆಯಿತು.
ಕೋವಿಡ್ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳೀಯರಿಗೆ ಮಾತ್ರ ಜಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿತ್ತು. ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.
ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾವಿರಾರು ಜನರು ರಥೋತ್ಸವದಲ್ಲಿ ಪಾಲ್ಗೊಂಡು ತೇರನ್ನು ಎಳೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.