ADVERTISEMENT

ಮಹದೇಶ್ವರ ಬೆಟ್ಟ | ಮಹಾ ಶಿವರಾತ್ರಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 7:59 IST
Last Updated 1 ಮಾರ್ಚ್ 2025, 7:59 IST
<div class="paragraphs"><p>ಮಹಾ ಶಿವರಾತ್ರಿ ರಥೋತ್ಸವ</p></div>

ಮಹಾ ಶಿವರಾತ್ರಿ ರಥೋತ್ಸವ

   

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಶನಿವಾರ ವಿಜೃಂಭಣೆಯ ಮಹಾಶಿವರಾತ್ರಿ ರಥೋತ್ಸವ ನಡೆಯಿತು.

ಕ್ಷೇತ್ರದಲ್ಲಿ ಕಳೆದ ಐದು ದಿನಗಳಿಂದ ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು ಕೊನೆಯ ದಿನವಾದ ಶನಿವಾರ ಮಹದೇಶ್ವರ ಸ್ವಾಮಿಯ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು.

ADVERTISEMENT

ಮೊದಲಿಗೆ ದೇವರ ಉತ್ಸವ ಮೂರ್ತಿಯನ್ನು ದೇವಾಲಯದ ಒಳ ಆವರಣದಲ್ಲಿ ಪ್ರದಕ್ಷಿಣೆ ಹಾಕಲಾಯಿತು. ನಂತರ ಉತ್ಸವ ಮೂರ್ತಿಯನ್ನು ಸಾಲೂರು ಮಠದ ಶಾಂತ ಮಲ್ಲಿಕಾರ್ಜುನ ಶ್ರೀಗಳು ರಥದ ಬಳಿ ಕೊಂಡೊಯ್ದು ಸುತ್ತಲೂ ಪ್ರದಕ್ಷಿಣೆ ಹಾಕಿಸಿದರು.

ಬಳಿಕ ಉತ್ಸವ ಮೂರ್ತಿಗೆ ಬೇಡಗಂಪಣ ಹೆಣ್ಣು ಮಕ್ಕಳು ಬೆಲ್ಲದ ಆರತಿ ಮಾಡಿದ ನಂತರ ಮಹದೇಶ್ವರ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಿ ಮಹಾ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭ ಭಕ್ತರ ಉಘೇ ಉಘೇ ಮಾದೇಶ್ವರ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಸಾವಿರಾರು ಭಕ್ತರು ರಥ ಎಳೆದು ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.