ADVERTISEMENT

ಮಹದೇಶ್ವರ ದೇವಾಲಯ: ₹2.65 ಕೋಟಿ ಹಣ ಸಂಗ್ರಹ

​ಪ್ರಜಾವಾಣಿ ವಾರ್ತೆ
Published 18 ಜೂನ್ 2025, 15:57 IST
Last Updated 18 ಜೂನ್ 2025, 15:57 IST
ಹುಂಡಿ ಹಣ ಎಣಿಕೆ ಮಾಡುತ್ತಿರುವ ಪ್ರಾಧಿಕಾರದ ಸಿಬ್ಬಂದಿ
ಹುಂಡಿ ಹಣ ಎಣಿಕೆ ಮಾಡುತ್ತಿರುವ ಪ್ರಾಧಿಕಾರದ ಸಿಬ್ಬಂದಿ   

ಮಹದೇಶ್ವರ ಬೆಟ್ಟ: ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ ಸಂಗ್ರಹವಾಗಿದ್ದ ಹುಂಡಿ ಹಣ ಎಣಿಕೆ ಕಾರ್ಯ ಬುಧವಾರ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದಲ್ಲಿರುವ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು.

ಶಾಂತಮಲ್ಲಿಕಾರ್ಜುನಸ್ವಾಮಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 34 ದಿನಗಳಿಂದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಎಣಿಕೆ ಕಾರ್ಯದಲ್ಲಿ ಒಟ್ಟು ₹2,65,04,712 (ಹುಂಡಿ ಮತ್ತು ಇ-ಹುಂಡಿ ಸೇರಿ) ನಗದು ಹಾಗೂ ಚಿನ್ನ 58 ಗ್ರಾಂ, ಬೆಳ್ಳಿ 2 ಕೆ.ಜಿ 70 ಗ್ರಾಂ ದೊರೆತಿದೆ.

ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರ ಮಹದೇವು ಸಿ., ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಲೆಕ್ಕಾಧೀಕ್ಷಕ ಗುರುಮಲ್ಲಯ್ಯ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಬಸವಣ್ಣ, ಶಿರಸ್ತೇದಾರ್ ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಫ್‌ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.