
ಪ್ರಜಾವಾಣಿ ವಾರ್ತೆ
ಮಹದೇಶ್ವರ ಬೆಟ್ಟ: ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾಗಿದ್ದ ಹಣ ಎಣಿಕೆ ಕಾರ್ಯ ಗುರುವಾರ ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಜರುಗಿತು. 28 ದಿನಗಳಲ್ಲಿ ಒಟ್ಟು ₹ 2,27,24,757 (ಹುಂಡಿ ಮತ್ತು ಇ-ಹುಂಡಿ ಸೇರಿ) ಹಾಗೂ ಚಿನ್ನ 46 ಗ್ರಾಂ, ಬೆಳ್ಳಿ 01 ಕೆ.ಜಿ 350 ಗ್ರಾಂ ಹುಂಡಿಯಲ್ಲಿ ದೊರೆತಿದೆ. ವಿದೇಶಿಯ 9 ನೋಟುಗಳು ಹಾಗೂ ₹2 ಸಾವಿರ ಮುಖಬೆಲೆಯ 9 ನೋಟುಗಳು ದೊರೆತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.