
ಕೊಳ್ಳೇಗಾಲ: ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಎನ್. ಮಹೇಶ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿರುವುದನ್ನು ಖಂಡಿಸಿ ಕೆಲ ಮುಖಂಡರು ಅವರ ವಿರುದ್ಧ ಫ್ಲೆಕ್ಸ್ ಅಳವಡಿಸಿದ್ದಾರೆ.
ಇಲ್ಲಿನ ಭೀಮ ನಗರದ ಎರಡು ಹೆಬ್ಬಾಗಿಲಲ್ಲೂ ಸಹ ಸಂವಿಧಾನದ ವಿರೋಧಿ ಹಾಗೂ ಸಮುದಾಯದ ದ್ರೋಹಿ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎನ್.ಮಹೇಶ್‌ಗೆ ಭೀಮ ನಗರಕ್ಕೆ ಪ್ರವೇಶವಿಲ್ಲ ಎಂದು ಫ್ಲೆಕ್ಸನ್ನು ಅಳವಡಿಸಿದ್ದಾರೆ. ಫ್ಲೆಕ್ಸ್ ಅಳವಡಿಸಿದ 30 ನಿಮಿಷಕ್ಕೆ ಭೀಮ ನಗರದ ಮುಖಂಡರು ಫ್ಲೆಕ್ಸನ್ನು ತೆರವು ಮಾಡಿಸಿದ್ದಾರೆ.
‘ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಇಂತಹ ಫ್ಲೆಕ್ಸ್‌ಗಳನ್ನು ಅಳವಡಿಸುವಂತಿಲ್ಲ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸೋಣ ಯಾರೂ ಸಹ ಇದರ ಬಗ್ಗೆ ಮಾತನಾಡುವಂತಿಲ್ಲ’ ಎಂದು ಕೆಲ ಮುಖಂಡರು ಹೇಳಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.