ಯಳಂದೂರು ಪಟ್ಟಣ ಠಾಣೆಯಲ್ಲಿ ಭಾನುವಾರ ಬಕ್ರೀದ್ ಅಂಗವಾಗಿ ಮುಸ್ಲಿಂ ಮುಖಂಡರೊಂದಿಗೆ ಸರ್ಕಲ್ ಇನ್‌ಸ್ಪೆಕ್ಟರ್ ಆರ್.ಶ್ರೀಕಾಂತ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು
ಯಳಂದೂರು: ಬಕ್ರೀದ್ ಆಚರಣೆ ಅಂಗವಾಗಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರೊಂದಿಗೆ ಸರ್ಕಲ್ ಇನ್‌ಸ್ಪೆಕ್ಟರ್ ಆರ್.ಶ್ರೀಕಾಂತ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಯಿತು.
ಶ್ರೀಕಾಂತ್ ಮಾತನಾಡಿ, ‘ಇದೇ 7ರಂದು ಪಟ್ಟಣ ಮತ್ತು ತಾಲ್ಲೂಕಿನ ಗ್ರಾಮಗಳಲ್ಲಿ ನಡೆಯಲಿರುವ ಬಕ್ರೀದ್ ಆಚರಣೆ ನಡೆಯಲಿದ್ದು, ಮುಸ್ಲಿಂ ಮುಖಂಡರು ಶಾಂತಿ, ಸೌಹಾರ್ದತೆ ಕಾಪಾಡಬೇಕು. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡು ಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದರು.
ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಹಿಂದಿನಿಂದಲೂ ಸೌಹಾರ್ದತೆಯಿಂದ ಹಬ್ಬ ಆಚರಿಸಿಕೊಂಡು ಬರಲಾಗಿದೆ. ಮುಂದಿನ ದಿನಗಳಲ್ಲೂ ಇದೇ ಸಂಸ್ಕೃತಿ ಮುಂದುವರಿಸಿಕೊಂಡು ಹೋಗಬೇಕು. ಸಾಮೂಹಿಕ ಪ್ರಾರ್ಥನೆಗೆ ತೆರಳುವಾಗ ಸಾರ್ವಜನಿಕರಿಗೆ ತೊಂದರೆಯಾಗದಂತೆ, ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಸಮುದಾಯದ ಮುಖಂಡರು ನಿರ್ವಹಣೆ ಮಾಡಬೇಕು. ಹೆಚ್ಚಿನ ಗದ್ದಲ ಗಲಾಟೆಯಾಗದಂತೆ ನಿಗಾವಹಿಸಬೇಕು ಎಂದು ಅವರು ತಿಳಿಸಿದರು.
ಪಿಎಸ್ಐ ಎಸ್.ಕೆ.ಆಕಾಶ್, ಮುಖಂಡರಾದ ನಯಾಜ್ ಖಾನ್, ಇರ್ಫಾನ್, ಮುನಾವರ್ ಬೇಗ್, ಮುನಾವರ್ ಪಾಷ, ಪೊಲೀಸ್ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.