ಗುಂಡ್ಲುಪೇಟೆ: ವಾಹನವೊಂದು ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟ ಘಟನೆ ತಾಲ್ಲೂಕಿನ ಬಂಡೀಪುರ ರಾಷ್ಟ್ರೀಯ ಹೆದ್ದಾರಿ-67 ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಬಳಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಬಂಡೀಪುರ ರಸ್ತೆ ದಾಟುತ್ತಿದ್ದ ಸುಮಾರು 4 ವರ್ಷದ ಗಂಡು ಜಿಂಕೆಗೆ ಗುಂಡ್ಲುಪೇಟೆ ಕಡೆಯಿಂದ ವೇಗವಾಗಿ ಬಂದ ವಾಹನವೊಂದು ಡಿಕ್ಕಿ ಹೊಡೆದಿದೆ.
ಸ್ಥಳಕ್ಕೆ ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜಿಂಕೆ ಕಳೇಬರವನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಡಿಕ್ಕಿ ಹೊಡೆದು ಪರಾರಿಯಾಗಿರುವ ವಾಹನ ಪತ್ತೆಗೆ ಕ್ರಮವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.