
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ‘ಜಿಲ್ಲೆಯ ಪ್ರಸಿದ್ದ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರು ಪಾದಯಾತ್ರೆ ಮೂಲಕ ತೆರಳಲು ಹಾಗೂ ದ್ವಿಚಕ್ರ ವಾಹನಗಳಲ್ಲಿ ಸಂಚರಿಸಲು ಬೆಳಿಗ್ಗೆ 7 ರಿಂದ ಸಂಜೆ 4 ಗಂಟೆಯವರೆಗೆ ಮಾತ್ರ ಅವಕಾಶ ನೀಡಲಾಗಿದೆ’ ಎಂದು ಜಿಲ್ಲಾಧಿಕಾರಿ ಶ್ರೀರೂಪಾ ಆದೇಶಿಸಿದ್ದಾರೆ.
ಜ.25ರಿಂದ ಆದೇಶ ಜಾರಿಗೆ ಬರಲಿದ್ದು ಬೆಳಿಗ್ಗೆ 7 ಗಂಟೆಯ ಮುಂಚಿತವಾಗಿ ಹಾಗೂ ಸಂಜೆ 7 ಗಂಟೆಯ ನಂತರ ಭಕ್ತರು ಪಾದಯಾತ್ರೆಯಲ್ಲಾಗಲಿ, ದ್ವಿಚಕ್ರ ವಾಹನಗಳಲ್ಲಾಗಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವುದನ್ನು ನಿರ್ಬಂಧಿಸಲಾಗಿದೆ. ಭಕ್ತರು ಜಿಲ್ಲಾಡಳಿತದೊಂದಿಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.