ADVERTISEMENT

ಹನೂರು ಮಹದೇಶ್ವರ ಹುಂಡಿಯಲ್ಲಿ 45ಗ್ರಾಂ ಚಿನ್ನ, 2ಕೆ.ಜಿ.ಬೆಳ್ಳಿ, ವಿದೇಶಿ ಕರೆನ್ಸಿ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 6:52 IST
Last Updated 5 ಫೆಬ್ರುವರಿ 2026, 6:52 IST
<div class="paragraphs"><p><strong>ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.</strong></p></div>

ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಹುಂಡಿ ಎಣಿಕೆ ಕಾರ್ಯ ನಡೆಯಿತು.

   

ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 27 ದಿನಗಳ ಅವಧಿಯಲ್ಲಿ ₹2.14 ಕೋಟಿ ಸಂಗ್ರಹವಾಗಿದೆ.

ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಶಾಂತ ಮಲ್ಲಿಕಾರ್ಜುನಸ್ವಾಮಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿಟಿವಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು. ಎಣಿಕೆ ಕಾರ್ಯವು ಸಂಜೆ 6.30ರವರೆಗೂ ನಡೆಯಿತು.

ADVERTISEMENT

ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಅಯ್ಯಪ್ಪ ಸ್ವಾಮಿ, ಓಂ ಶಕ್ತಿ ಭಕ್ತರು, ಮಕರ ಸಂಕ್ರಾಂತಿ ಹಾಗೂ ‘ಶಕ್ತಿ’ ಯೋಜನೆಯ ಮೂಲಕ ಉಚಿತ ಪ್ರಯಾಣ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ ₹2.14 ಕೋಟಿ ನಗದು, 45 ಗ್ರಾಂ ಚಿನ್ನ ಹಾಗೂ 2.320 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ.

ಇ- ಹುಂಡಿಯಲ್ಲಿ ₹6.15 ಲಕ್ಷ, ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3 ನೋಟುಗಳು ಹಾಗೂ 9 ವಿದೇಶಿ ಕರೆನ್ಸಿಗಳು ಸಂಗ್ರಹವಾಗಿವೆ.

ಎಣಿಕೆ ಸಂದರ್ಭ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ನಾಮ ನಿರ್ದೇಶಿತ ಸದಸ್ಯರಾದ ಮರಿಸ್ವಾಮಿ, ಮಹದೇವಪ್ಪ, ಕುಮಾರ್ ವಿಜಯ್, ಲೆಕ್ಕಪತ್ರ ಸಲಹೆಗಾರ ಮಹದೇವ್, ಲೆಕ್ಕಾಧೀಕ್ಷಕ ಗುರುಮಲ್ಲಯ್ಯ, ಜಿಲ್ಲಾಧಿಕಾರಿ ಕಚೇರಿಯ ಪ್ರಥಮ ದರ್ಜೆ ಸಹಾಯಕಿ ಭಾರತಿ, ಕೊಳ್ಳೇಗಾಲ ಬ್ಯಾಂಕ್ ಆಫ್ ಬರೋಡಾ ವ್ಯವಸ್ಥಾಪಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.