ಹುಲಿ
ಹನೂರು (ಚಾಮರಾಜನಗರ ಜಿಲ್ಲೆ): ಮಲೆ ಮಹದೇಶ್ವರ ವನ್ಯಧಾಮದಲ್ಲಿ ಹುಲಿ ಹತ್ಯೆ ಪ್ರಕರಣದ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಲಾಗಿದೆ.
ಕೊಳ್ಳೇಗಾಲದ ಜೆಎಂಎಫ್‌ಸಿ ಕೋರ್ಟ್‌ನಿಂದ ಸೋಮವಾರ ಅನುಮತಿ ಪಡೆದು, ಆರೋಪಿಗಳಾದ ಪಚ್ಚಮಲ್ಲು, ಗಣೇಶ್, ಸಂಪು ಅವರನ್ನು ವಶಕ್ಕೆ ಪಡೆದು ಅಧಿಕಾರಿಗಳು ಸ್ಥಳ ಮಹಜರು ನಡೆಸಿದರು. ತಲೆಮರೆಸಿಕೊಂಡಿರುವ ಇತರರಿಗೆ ಶೋಧ ನಡೆದಿದೆ.
‘ತ್ವರಿತವಾಗಿ ಆರೋಪಪಟ್ಟಿ ಸಲ್ಲಿಸಲು ಸೂಚಿಸಲಾಗಿದೆ. ಸಿಬ್ಬಂದಿ ನಿರ್ಲಕ್ಷ್ಯ ಅಥವಾ ಕರ್ತವ್ಯ ಲೋಪ ಎಸಗಿದ್ದರೆ ನಿರ್ದಾಕ್ಷಿಣ್ಯ ಶಿಸ್ತುಕ್ರಮ ಜರುಗಿಸಲಾಗುವುದು. ಪಿಸಿಸಿಎಫ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ’ ಅರಣ್ಯ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
‘ಕಾಡಿನಂಚು ಮತ್ತು ಕಾಡಿನಲ್ಲಿರುವ ಹಾಡಿಗಳಲ್ಲಿರುವ ಜನರ ಆರ್ಥಿಕ ಅಭಿವೃದ್ಧಿಗೆ ಕ್ರಮವಹಿಸಲು ವನ್ಯಜೀವಿಗಳೊಂದಿಗೆ ಸಹಬಾಳ್ವೆಗೆ ಉತ್ತೇಜನ ಕುರಿತು ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.