ADVERTISEMENT

ಹನೂರು: ಕಡವೆಯ ಒಣಮಾಂಸ ಸಂಗ್ರಹ; ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2024, 14:11 IST
Last Updated 15 ಫೆಬ್ರುವರಿ 2024, 14:11 IST
ಕಡವೆ ಮಾಂಸ ಸಂಗ್ರಹಿಸಿಟ್ಟಿದ್ದ ಗೋವಿಂದ ಅವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವುದು
ಕಡವೆ ಮಾಂಸ ಸಂಗ್ರಹಿಸಿಟ್ಟಿದ್ದ ಗೋವಿಂದ ಅವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿರುವುದು   

ಹನೂರು: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವಲಯದ ಮೀಣ್ಯಂ ಗ್ರಾಮದ ತೋಟದ ಮನೆಯೊಂದರಲ್ಲಿ ಏಳು ಕೆಜಿಯಷ್ಟು ಕಡವೆ ಒಣಮಾಂಸವನ್ನು ಸಂಗ್ರಹಿಸಿಟ್ಟಿದ್ದ ಗೋವಿಂದ ಎಂಬುವವರನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. 

ಖಚಿತ ಮಾಹಿತಿ ಮೇರೆಗೆ ಹೂಗ್ಯಂ ವಲಯದ ಅಧಿಕಾರಿಗಳು ಮತ್ತು ಸಿಬ್ಬಂದಿ ಗೋವಿಂದ ಅವರ ತೋಟದ ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಕಡವೆಯ ಒಣಮಾಂಸ ಇರುವುದು ಪತ್ತೆಯಾಗಿದೆ. ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT