ADVERTISEMENT

ಪಡಿತರ ಅಕ್ಕಿ ಅಕ್ರಮ ದಾಸ್ತಾನು: ವ್ಯಕ್ತಿ ಬಂಧನ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 14:01 IST
Last Updated 24 ಜನವರಿ 2025, 14:01 IST
ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದರು
ಕೊಳ್ಳೇಗಾಲ ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದರು   

ಕೊಳ್ಳೇಗಾಲ: ತಾಲ್ಲೂಕಿನ ಮಧುವನಹಳ್ಳಿ ಗ್ರಾಮದಲ್ಲಿ ಪಡಿತರ ಅಕ್ಕಿ ಅಕ್ರಮ ದಾಸ್ತಾನು ಮಾಡಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಗ್ರಾಮದ ಅಜ್ಮಲ್ ಅಹಮ್ಮದ್ ಬೇಗ್ ಬಂಧಿತ ಆರೋಪಿ. ಈತ 10 ಮೂಟೆಯಲ್ಲಿ ದಾಸ್ತಾನು ಮಾಡಿದ್ದ 420 ಕೆ.ಜಿ ತೂಕದ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಈತ ಗ್ರಾಮದ ಸಾರ್ವಜನಿಕರಿಂದ ಕಡಿಮೆ ಬೆಲೆಗೆ ಅಕ್ಕಿ ಖರೀದಿ ಮಾಡಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಲುವಾಗಿ ಸಾಗಾಣಿಕೆ ಮಾಡಲು ತನ್ನ ಮನೆ ಮುಂದೆ ದಾಸ್ತಾನು ಮಾಡಿದ್ದ. ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್ಐ ಸುಪ್ರೀತ್ ಹಾಗೂ ಕಂದಾಯ ಇಲಾಖೆ ಆಹಾರ ನಿರೀಕ್ಷಕ ಪ್ರಸಾದ್ ಜಂಟಿಯಾಗಿ ದಾಳಿ ನಡೆಸಿ ಪಡಿತರ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.

ದಾಳಿಯಲ್ಲಿ ಗ್ರಾಮಾಂತರ ಪೊಲೀಸ್ ಠಾಣೆಯ ಎಎಸ್ಐ ಎಂ.ಗೋವಿಂದ, ಕಾನ್ಸಟೇಬಲ್ ಮನೋಹರ್, ಚಿಕ್ಕಣ್ಣ, ಚಾಲಕ ನಂಜುಂಡಸ್ವಾಮಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.