ಹನೂರು: 10.8 ಕೆ.ಜಿ. ಒಣ ಗಾಂಜಾ ಸಾಗಿಸುತ್ತಿದ್ದ ತಾಲ್ಲೂಕಿನ ಚಿಕ್ಕಾಲತ್ತೂರು ಗ್ರಾಮದ ಗೋವಿಂದ ಎಂಬುವರನ್ನು ರಾಮಾಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಅಂದಾಜು ₹ 8 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೆಂಪಯ್ಯನಹಟ್ಟಿ ಗ್ರಾಮದ ಮದುರೆವೀರನ ದೇವಸ್ಥಾನದ ಬಳಿ ಗಾಂಜಾ ಸಾಗಣೆ ಮಾಡುತ್ತಿರುವ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ, ಪೊಲೀಸರು ಕಾರ್ಯಾಚರಣೆ ನಡೆಸಿ ಮಾಲು ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್‌ಪಿ ನಾಗರಾಜು ಮಾರ್ಗದರ್ಶನದಲ್ಲಿ ರಾಮಾಪುರ ಠಾಣೆಯ ಇನ್‌ಸ್ಪೆಕ್ಟರ್ ನಂಜುಂಡಸ್ವಾಮಿ ಹಾಗೂ ಸಿಬ್ಬಂದಿ ಲಿಂಗರಾಜು, ಸೈಯದ್ ಮುಷರಫ್, ಗೋವಿಂದ, ನಾಗೇಂದ್ರ, ಸುರೇಶ್, ರಂಗಸ್ವಾಮಿ, ಮನೋಹರ್, ಶಿವಕುಮಾರ್, ಪ್ರಕಾಶ್ ಕಾರ್ಯಾಚರಣೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.