ಸಾವು
ಪ್ರಾತಿನಿಧಿಕ ಚಿತ್ರ
ಕೊಳ್ಳೇಗಾಲ: ತಾಲ್ಲೂಕಿನ ಯಡಕುರಿಯಾ ಗ್ರಾಮದ ಸೇತುವೆ ಮೇಲಿಂದ ಬುಧವಾರ ಆಯತಪ್ಪಿ ಕಾವೇರಿ ನದಿಗೆ ಬಿದ್ದ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ.
ತಮಿಳುನಾಡು ಮೂಲದ ಧರ್ಮಪುರಿ ಜಿಲ್ಲೆಯ ಗಣೇಶ್(35) ಮೃತರು. ತಮಿಳುನಾಡಿನಿಂದ ಕಬ್ಬು ಕಟಾವು ಮಾಡಲು ಬಂದಿದ್ದರು. ಈ ವೇಳೆ ಯಡಕುರಿಯಾ ಸೇತುವೆ ಮೇಲಿಂದ ನೀರನ್ನು ನೋಡುತ್ತಾ ಇದ್ದಾಗ ಆಯಾತಪ್ಪಿ ನದಿಗೆ ಬಿದ್ದಿದ್ದಾರೆ.
ತಕ್ಷಣ ಅಲ್ಲೇ ಇದ್ದ ಕೂಲಿ–ಕಾರ್ಮಿಕರು ಗಣೇಶ್ಅವರನ್ನು ಮೇಲೆತ್ತಿ ಆಂಬೆಲೆನ್ಸ್‌ನಲ್ಲಿ ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಮೃತನ ಪತ್ನಿ ದೂರು ನೀಡಿದ್ದಾರೆ. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಶವವನ್ನು ವಾರಸುದಾರರಿಗೆ ಒಪ್ಪಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.