ಸಾವು
(ಪ್ರಾತಿನಿಧಿಕ ಚಿತ್ರ)
ಕೊಳ್ಳೇಗಾಲ: ತಾಲ್ಲೂಕಿನ ಕಾಮಗೆರೆ ಗ್ರಾಮದ ರಾಚಪ್ಪ (65) ಇಲ್ಲಿನ ಬಸ್ ನಿಲ್ದಾಣದ ಶೌಚಾಲಯದಲ್ಲಿ ಕುಸಿದು ಬಿದ್ದು ಗುರುವಾರ ಮೃತಪಟ್ಟಿದ್ದಾರೆ.
ಇವರು ನಗರಕ್ಕೆ ಬಂದು ತಮ್ಮ ಕೆಲಸಗಳನ್ನು ಮುಗಿಸಿಕೊಂಡು ಸ್ವಗ್ರಾಮಕ್ಕೆ ಹೋಗಲು ನಗರದ ಬಸ್ ನಿಲ್ದಾಣಕ್ಕೆ ಬಂದಿದ್ದಾಗ ಅಲ್ಲಿನ ಶೌಚಾಲಯಕ್ಕೆ ತೆರಳಿದ್ದರು. ಅಲ್ಲಿ ಏಕಾಏಕಿ ಕುಸಿದು ಮೃತಪಟ್ಟಿದ್ದಾರೆ. ಮೇಲ್ನೋಟಕ್ಕೆ ಹೃದಯಘಾತ ಆಗಿರುವ ಅನುಮಾನ ವ್ಯಕ್ತವಾಗಿದೆ. ಶವವನ್ನು ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯ ಶವಗಾರಕ್ಕೆ ಸ್ಥಳಾಂತರಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.