ಗುಂಡ್ಲುಪೇಟೆ: ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮನಮೋಹನ್ ಸಿಂಗ್ ಅವರ ಭಾವಚಿತ್ರವಿರಿಸಿ ಪೂಜೆ ಸಲ್ಲಿಸಿ ಮಾತನಾಡಿದ ಪುರಸಭೆ ಸದಸ್ಯ ಮಹಮ್ಮದ್ ಇಲಿಯಾಸ್, ಮನಮೋಹನ್ ಸಿಂಗ್ ಹತ್ತು ವರ್ಷಗಳ ಕಾಲ ದೇಶದ ಪ್ರಧಾನಿಯಾಗಿ ಕೆಲಸ ಮಾಡಿ ದೇಶದ ಪ್ರಗತಿಗೆ ಬುನಾದಿ ಹಾಕಿಕೊಟ್ಟಿದ್ದಾರೆ. ಮಾಹಿತಿ ಹಕ್ಕು ಕಾಯ್ದೆ, ಮಕ್ಕಳ ಶಿಕ್ಷಣ ಹಕ್ಕು ಕಾಯ್ದೆ, ಆಹಾರ ಭದ್ರತೆ, ಆಧಾರ್ ಜೋಡಣೆ ಮುಂತಾದ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.
ಸದಾ ದೇಶದ ಅಭಿವೃದ್ಧಿ ಕುರಿತು ಚಿಂತಿಸುತ್ತಿದ್ದ ಅವರ ನಿಧನ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದು ಹೇಳಿದರು. ಪುರಸಭೆ ಸದಸ್ಯ ಮಧುಸೂಧನ್, ಶ್ರೀನಿವಾಸ್ ಕಣ್ಣಪ್ಪ, ಕಾರ್ಗಳ್ಳಿ ಸುರೇಶ್, ಶಿವಪುರ ಮಂಜಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.