ಮೇಕೆದಾಟು ಯೋಜನೆ ಪ್ರದೇಶ
ಚಾಮರಾಜನಗರ: ಕೇಂದ್ರ ಸರ್ಕಾರ ಅನುಮತಿ ನೀಡಿದರೆ ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ ಆಯೋಜಿಸಿರುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲು ಹೆಲಿಪ್ಯಾಡ್‌ಗೆ ಬಂದಿಳಿದ ಸಂದರ್ಭ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಅನುಮತಿ ಕೋರಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರನ್ನು ಹಲವು ಬಾರಿ ಭೇಟಿಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಕೇಂದ್ರ ಅನುಮತಿ ನೀಡಿದರೆ ನಾಳೆಯೇ ಯೋಜನೆ ಜಾರಿ ಮಾಡುವುದಾಗಿ ಸಿಎಂ ಹೇಳಿದರು.
ರಾಜ್ಯಕ್ಕೆ ಕೊಡಬೇಕಿರುವ ಪಾಲನ್ನೂ ಕೇಂದ್ರ ಸರಿಯಾಗಿ ಕೊಡುತ್ತಿಲ್ಲ. 2023ರಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ₹ 5,300 ಕೋಟಿ ನೀಡುವುದಾಗಿ ಹೇಳಿದ್ದ ಕೇಂದ್ರ ಇದುವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿಲ್ಲ. ಅನುದಾನ ಹಂಚಿಕೆಯಲ್ಲೂ ರಾಜಕೀಯ ಮಾಡುತ್ತಿದೆ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.