ADVERTISEMENT

ಮಾನಸಿಕ ಆರೋಗ್ಯವೂ ಮುಖ್ಯ

ಕಾನೂನು ಅರಿವು ಕಾರ್ಯಕ್ರಮದಲ್ಲಿ ನ್ಯಾಯಾಧೀಶ ದೀಪು

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 3:18 IST
Last Updated 12 ಅಕ್ಟೋಬರ್ 2025, 3:18 IST
ಗುಂಡ್ಲುಪೇಟೆ ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ದೀಪು ಎಂ.ಟಿ ಉದ್ಘಾಟಿಸಿದರು
ಗುಂಡ್ಲುಪೇಟೆ ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ನಡೆದ ಕಾನೂನು ಅರಿವು ಕಾರ್ಯಕ್ರಮವನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ದೀಪು ಎಂ.ಟಿ ಉದ್ಘಾಟಿಸಿದರು   

ಗುಂಡ್ಲುಪೇಟೆ: ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಗಾಗಿ ಸಂಗೀತ, ಕಲೆ, ಕ್ರೀಡಾ ಚಟುವಟಿಕೆ, ಯೋಗ ಮತ್ತು ವ್ಯಾಯಾಮದಲ್ಲಿ ತೊಡಗಬೇಕೆಂದು ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ದೀಪು ಎಂ.ಟಿ ಸಲಹೆ ನೀಡಿದರು.

ಪಟ್ಟಣದ ದೊಡ್ಡಹುಂಡಿ ಭೋಗಪ್ಪ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ತಾಲ್ಲೂಕು ವಕೀಲರ ಸಂಘ, ದೊಡ್ಡಹುಂಡಿ ಬೋಗಪ್ಪ ಪದವಿ ಪೂರ್ವ ಕಾಲೇಜು ಹಾಗೂ ತಾಲ್ಲೂಕು ಆರೋಗ್ಯ ಇಲಾಖೆ ಗುಂಡ್ಲುಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಒಬ್ಬ ವ್ಯಕ್ತಿ ಸಧೃಡವಾಗಿರಬೇಕಾದರೆ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯ ಮುಖ್ಯ. ಕೆಲಸ ಮಾಡಲು ಕೇವಲ ದೈಹಿಕ ಸಾಮರ್ಥ್ಯವಿದ್ದರೆ ಸಾಲದು, ಮಾನಸಿಕವಾಗಿ ಆಸಕ್ತಿಯಿಂದ ಇದ್ದಾಗ ಒತ್ತಡ ರಹಿತವಾಗಿ ಕೆಲಸವನ್ನು ಪರಿಪೂರ್ಣವಾಗಿ ನಿರ್ವಹಿಸಬಹುದು. ಇಂದು ಮಾನಸಿಕ ಒತ್ತಡ ಚಿಕ್ಕ ವಯಸ್ಸಿಗೆ ಶುರುವಾಗಿದೆ ಎಂದು ತಿಳಿಸಿದರು.

ADVERTISEMENT

ವಿದ್ಯಾರ್ಥಿಗಳಿಗೆ ಓದುವ ವಿಚಾರದಲ್ಲಿ ಅಡಚಣೆ ಉಂಟಾದರೆ ಮಾನಸಿಕ ಒತ್ತಡಕ್ಕೆ ಸಿಲುಕುತ್ತಾರೆ. ದೇಹ ಮತ್ತು ಮನಸು ಎರಡನ್ನೂ ಉತ್ತಮವಾಗಿ ಇಟ್ಟುಕೊಳ್ಳಬೇಕು.ಇದರಿಂದ ದೈನಂದಿನ ಕೆಲಸಗಳು ಸಲೀಸಾಗಿ ಆಗಲು ಸಹಕಾರಿಯಾಗುತ್ತದೆ. ಆರ್ಥಿಕವಾಗಿ ಹಿಂದುಳಿದಿರುವ ಜನರಿಗೆ ತಾಲ್ಲೂಕು ಕಾನೂನು ಸೇವೆಗಳ ಸಮಿತಿಯಿಂದ ಉಚಿತ ಕಾನೂನಿನ ನೆರವು ನೀಡಲಾಗುತ್ತಿದ್ದು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ವೈದ್ಯರಾದ ಡಾ.ತ್ರಿವೇಣಿ ಮಾತನಾಡಿ, ಮಾನಸಿಕವಾಗಿ ಬಳಲುತ್ತಿರುವ ರೋಗಿಗಳಿಗೆ ಸಮಾಜದಲ್ಲಿ ಗೌರವ ಸಿಗಬೇಕು ಎನ್ನುವ ದೃಷ್ಟಿಯಿಂದ ಮಾನಸಿಕ ಆರೋಗ್ಯ ಹದಗೆಟ್ಟವರಿಗೆ ಕೌನ್ಸಿಲಿಂಗ್ ಮತ್ತು ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್, ವಕೀಲ ಬಂಗಾರನಾಯಕ್, ಅರವಿಂದ್, ದೊಡ್ಡಹುಂಡಿ ಭೋಗಪ್ಪ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹೇಮಾವತಿ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.