ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲದ ಹೊಸಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸಿದ್ದಪ್ಪ, ಉಪಾಧ್ಯಕ್ಷರಾಗಿ ನಂಜಪ್ಪ ಅವಿರೋಧವಾಗಿ ಆಯ್ಕೆಯಾದರು.
ಹೊಸಹಳ್ಳಿ ಸಂಘದ ಕಚೇರಿ ಆವರಣದಲ್ಲಿ ನಡೆದ ಚುಣಾವಣೆ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಸಹಕಾರ ಸಂಘಗಳ ಸಹಾಯಕ ನಿಬಂಧಕರ ಕಚೇರಿ ಅಧೀಕ್ಷಕ ನಾಗೇಶ್ ಅವಿರೋಧ ಆಯ್ಕೆ ಘೋಷಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಮಹದೇವಪ್ಪ, ನೀಲಮ್ಮ, ನಾಗಪ್ಪ, ಸದಾನಂದ, ಮಹದೇವಪ್ಪ, ಮಹೇಶ್, ದೊಡ್ಡಬಸಮ್ಮ, ಸಿದ್ದಶೆಟ್ಟಿ, ಚಕ್ಕಮಾದಯ್ಯ, ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರುಸಿದ್ದಪ್ಪ, ನೌಕರ ಶಿವಕುಮಾರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.