ADVERTISEMENT

ಖಾಸಗಿ ವೈದ್ಯರ ಮುಷ್ಕರ: ಮಿಶ್ರ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 13:10 IST
Last Updated 11 ಡಿಸೆಂಬರ್ 2020, 13:10 IST
ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ತೆರೆದಿದ್ದುದರಿಂದ ಜಿಲ್ಲಾಸ್ಪತ್ರೆಯಲ್ಲಿ ಜನ ಸಂದಣಿ ಕಂಡು ಬರಲಿಲ್ಲ (ಎಡ ಚಿತ್ರ), ಯಳಂದೂರಿನಲ್ಲಿ ಕ್ಲಿನಿಕ್‌ ಮುಚ್ಚಿರುವುದು
ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್‌ಗಳು ತೆರೆದಿದ್ದುದರಿಂದ ಜಿಲ್ಲಾಸ್ಪತ್ರೆಯಲ್ಲಿ ಜನ ಸಂದಣಿ ಕಂಡು ಬರಲಿಲ್ಲ (ಎಡ ಚಿತ್ರ), ಯಳಂದೂರಿನಲ್ಲಿ ಕ್ಲಿನಿಕ್‌ ಮುಚ್ಚಿರುವುದು   

ಚಾಮರಾಜನಗರ: ಆಯುರ್ವೇದ ವೈದ್ಯರಿಗೆ ಕೆಲವು ಶಸ್ತ್ರಕ್ರಿಯೆಗಳನ್ನು ನಡೆಸಲು ಅನುಮತಿ ನೀಡಿರುವುದನ್ನು ಖಂಡಿಸಿ ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿದ್ದ ಮುಷ್ಕರಕ್ಕೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು.

ಜಿಲ್ಲಾ ಕೇಂದ್ರದಲ್ಲಿ ಜೆಎಸ್‌ಎಸ್‌ ಆಸ್ಪತ್ರೆಯಲ್ಲಿ ಹೊರರೋಗಿಗಳ ವಿಭಾಗ ಬಂದ್‌ ಆಗಿತ್ತು. ಉಳಿದ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.ಕ್ಲಿನಿಕ್‌ಗಳು ಕೂಡ ತೆರೆದಿದ್ದವು.

ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿ ವಿಭಾಗ ಕಾರ್ಯನಿರ್ವಹಿಸುತ್ತಿದ್ದುದರಿಂದ ಹಾಗೂ ಕ್ಲಿನಿಕ್‌ಗಳಲ್ಲಿ ವೈದ್ಯರೂ ಲಭ್ಯವಿದ್ದುದರಿಂದಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಂದಣಿ ಕಂಡು ಬರಲಿಲ್ಲ.

ADVERTISEMENT

ಯಳಂದೂರಿನಲ್ಲಿ ಅಲೋಪಥಿ ವೈದ್ಯರು ಕ್ಲಿನಿಕ್‌ಗಳನ್ನು ತೆರೆಯಲಿಲ್ಲ. ಕೊಳ್ಳೇಗಾಲ, ಗುಂಡ್ಲುಪೇಟೆ, ಹನೂರು ಭಾಗಗಳಲ್ಲಿ ಖಾಸಗಿ ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯವಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.