ADVERTISEMENT

ಗುಣಮಟ್ಟದ ಕಾಮಗಾರಿಗೆ ಶಾಸಕ ಮಂಜುನಾಥ್ ಸೂಚನೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2025, 14:40 IST
Last Updated 14 ಫೆಬ್ರುವರಿ 2025, 14:40 IST
ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶುಕ್ರವಾರ ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು
ಹನೂರು ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶುಕ್ರವಾರ ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು   

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯನ್ನು ಶುಕ್ರವಾರ ಶಾಸಕ ಎಂ.ಆರ್ ಮಂಜುನಾಥ್ ಪರಿಶೀಲಿಸಿದರು.

ಲೋಕೋಪಯೋಗಿ ಇಲಾಖೆಯ ವತಿಯಿಂದ ₹4.40 ಕೋಟಿ ವೆಚ್ಚದಲ್ಲಿ ಸುಮಾರು 1.72 ಕಿ.ಮೀ ರಸ್ತೆ ಡಾಂಬರೀಕರಣ ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು, ಗುತ್ತಿಗೆದಾರರು ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಇದರ ಜತೆಗೆ ಗ್ರಾಮಸ್ಥರು ಸಹಕರಿಸಬೇಕು ಎಂದರು.

ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಚಿನ್ನಣ್ಣ, ಮಹೇಶ್ ಮುಖಂಡರು ಹಾಗೂ ಸಾರ್ವಜನಿಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.