ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಶುಕ್ರವಾರ ಗುಂಡ್ಲುಪೇಟೆ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಶಾಲಾ ಮಕ್ಕಳೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಂಡರು
ಗುಂಡ್ಲುಪೇಟೆ: ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಅವರ 41ನೇ ಜನ್ಮದಿನದ ಅಂಗವಾಗಿ ತಾಲ್ಲೂಕಿನ ಅಗತಗೌಡನಹಳ್ಳಿ ಗ್ರಾಮದ ಸರ್ಕಾರಿ ಶಾಲೆಗೆ ನೆರವು ನೀಡಲಾಯಿತು.
ಶಾಲಾ ಮಕ್ಕಳೊಂದಿಗೆ ಸರಳವಾಗಿ ಜನ್ಮದಿನ ಆಚರಿಸಿಕೊಂಡ ಅವರು ವಿದ್ಯಾರ್ಥಿಗಳಿಗೆ ಸಿಹಿಹಂಚಿ, ಸ್ಕೂಲ್ ಬ್ಯಾಗ್ ಹಾಗೂ ನೋಟ್ ಬುಕ್‌ಗಳನ್ನು ವಿತರಿಸಿದರು. ಗ್ರಾಮಕ್ಕೆ ಶಾಮಿಯಾನ, 150 ಕುರ್ಚಿ, 20 ಟೇಬಲ್ ಕೊಡುಗೆಯಾಗಿ ನೀಡಿದರು.
ಈ ಸಂದರ್ಭ ಚಾಮುಲ್ ನಿರ್ದೇಶಕ ನಂಜುಂಡ ಪ್ರಸಾದ್, ಮುಖಂಡ ಹಂಗಳ ನಂಜಪ್ಪ, ಎಚ್.ಎನ್.ಬಸವರಾಜು, ಉದ್ಯಮಿ ಪುನೀತ್, ಅಗತಗೌಡನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ರಾಜೇಶ್, ಮಣಿಯಮ್ಮ ಹಾಗೂ ಗ್ರಾಮದ ಯಜಮಾನರು, ಮುಖಂಡರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.