ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟದ ಗೊರಸಾಣೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಶಾಸಕ ಎಂ.ಆರ್. ಮಂಜುನಾಥ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹದೇಶ್ವರ ಬೆಟ್ಟದ ಕ್ಲಸ್ಟರ್ ವ್ಯಾಪ್ತಿಯ ಗೊರಸಾಣೆ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ ಮತ್ತು ಸರ್ಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಬಳಿಕ ಮಾತನಾಡಿದ ಶಾಸಕರು, ‘ಮಹದೇಶ್ವರ ಬೆಟ್ಟ ವ್ಯಾಪ್ತಿಯ ಅರಣ್ಯ ಪ್ರದೇಶದ ಅಂಚಿನ ಗ್ರಾಮಗಳ ವಿದ್ಯಾರ್ಥಿಗಳು ಇಲ್ಲಿ ದಾಖಲಾಗಿದ್ದಾರೆ. 130 ವಿದ್ಯಾರ್ಥಿಗಳು ಬರುತ್ತಿರುವ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದ್ದಾರೆ. ಗೋಡೆ ನಿರ್ಮಾಣಕ್ಕೆ ಮುಂದಿನ ದಿನಗಳಲ್ಲಿ ಒತ್ತು ನೀಡಲಾಗುವುದು. ಇಂಡಿಗನತ್ತ, ಕೀರನಹೊಲ, ಹಳೆಯೂರು ಮುಂತಾದ ಗ್ರಾಮಗಳಿಂದ ಬರುವ ವಿದ್ಯಾರ್ಥಿಗಳು ಮೂಲಸೌಲಭ್ಯಗಳಿಂದ ವಂಚಿತರಾಗಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಿಗುವ ಅನುದಾನವನ್ನು ಕೊಡಿಸಲು ಶ್ರಮಿಸಲಾಗುವುದು’ ಎಂದರು.
ಶಾಲೆಯಲ್ಲಿ ಶಿಕ್ಷಕರಿಂದ ಮಕ್ಕಳ ಹಾಜರಾತಿ ಹಾಗೂ ಶಾಲೆಗೆ ಬೇಕಾದ ಮೂಲಸೌಲಭ್ಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.
ಮುಖಂಡರಾದ ಗಿರಿಯ, ನಾಗ, ಸಂತೋಷ್ ಕುಮಾರ್, ಶಿವಮೂರ್ತಿ, ಡಿ.ಆರ್. ಮಾದೇಶ್, ಡಿ.ಕೆ. ರಾಜು, ಚಿನ್ನವೆಂಕಟ್, ಜಯರಾಮು, ವಿಜಯ್ ಕುಮಾರ್, ಲೋಕೋಪಯೋಗಿ ಇಲಾಖೆಯ ಎಇಇ ಚಿನ್ನಣ್ಣ, ಸಂತೋಷ್ ಕುಮಾರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.