ADVERTISEMENT

ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಅಂಕ ಗಳಿಸಿ: ಶಾಸಕ ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 7:45 IST
Last Updated 13 ಫೆಬ್ರುವರಿ 2026, 7:45 IST
ಹನೂರು ತಾಲೂಕಿನ ಹೂಗ್ಯ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಭರವಸೆಯ ಬೆಳಕು ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.
ಹನೂರು ತಾಲೂಕಿನ ಹೂಗ್ಯ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಭರವಸೆಯ ಬೆಳಕು ಕಾರ್ಯಕ್ರಮ ಉದ್ಘಾಟನೆ ಮಾಡಿ ನಂತರ ಮಾತನಾಡಿದರು.   

ಹನೂರು: ‘ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮವಾದ ಅಂಕ ಗಳಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತರಬೇಕು’ ಎಂದು ಶಾಸಕ ಎಂ. ಆರ್. ಮಂಜುನಾಥ್  ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಹೇಳಿದರು.

ತಾಲೂಕಿನ ಹೂಗ್ಯ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ  ಹಮ್ಮಿಕೊಂಡಿದ್ದ ‘ಭರವಸೆಯ ಬೆಳಕು’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

 ಹನೂರು ತಾಲ್ಲೂಕು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ  ಹಿಂದೆ ಎಂಬ ಹಣೆ ಪಟ್ಟಿಯನ್ನು ಕಳಚಿದ್ದಾರೆ . ಮೊದಲ ಸ್ಥಾನಕ್ಕೆ ಏರಲು ಪ್ರಯತ್ನ ಮಾಡುತ್ತಿದ್ದೇವೆ.  ಶಿಕ್ಷಕರ ಮಾರ್ಗದರ್ಶನದಲ್ಲಿ ಉತ್ತಮ ಅಂಕ ಪಡೆದು ಮುಂದಿನ ಭವಿಷ್ಯಕ್ಕೆ ಸುಗಮವಾದ ದಾರಿ ಕಂಡು ಕೊಳ್ಳಬೇಕಾಗಿದೆ . ಪರೀಕ್ಷೆಗೆ   ಕೆಲವು ದಿನಗಳು ಮಾತ್ರ  ಉಳಿದಿದ್ದು ಪರಿಶ್ರಮ ಹಾಕುವ ಮೂಲಕ ಉತ್ತಮವಾದ ಅಂಕ ಪಡೆದುಕೊಳ್ಳಿ ಎಂದು ಸಲಹೆ ನೀಡಿದರು.

ADVERTISEMENT

ಸಾಹಿತಿ ಹನೂರು ಚೆನ್ನಪ್ಪ ಮಾತನಾಡಿ,  ತಾಲೂಕಿನಲ್ಲಿ ಶಾಸಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಅತ್ಯಂತ ಒಳ್ಳೆಯ ಕಾರ್ಯಕ್ರಮ ಹಮ್ಮಿಕೊಂಡಿದ್ದು,  ಮಕ್ಕಳು ಪಡೆದುಕೊಂಡು ಉತ್ತಮವಾದ ಅಂಕ ಪಡೆಯಬೇಕು.  ತಾಲ್ಲೂಕು ವಿಸ್ತಾರವಾಗಿದ್ದರೂ  ಅಧಿಕಾರಿಗಳು ಸಾಕಷ್ಟು ಶ್ರಮಪಟ್ಟು ತಾಲ್ಲೂಕನ್ನು ಪ್ರಥಮ ಸ್ಥಾನಕ್ಕೇರಿಸಲೇಬೇಕು ಎಂಬ ಹಠ ಹೊತ್ತಿದ್ದಾರೆ. ಎಲ್ಲರೂ ಸಹಕಾರ ನೀಡಬೇಕು ಎಂದರು.

 ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ ಆರ್ ಸಿ ವೆಂಕಟೇಶ್, ಹಾಗೂ  ಮುಖ್ಯ ಶಿಕ್ಷಕರು, ವಿದ್ಯಾರ್ಥಿಗಳು, ಹಾಗೂ ಸಂಪನ್ಮೂಲ ವ್ಯಕ್ತಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.