ಸಂತೇಮರಹಳ್ಳಿ: ಸಮೀಪದ ದೇಮಹಳ್ಳಿಯಲ್ಲಿ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಎಂಡಿಸಿಸಿ ಬ್ಯಾಂಕ್ ಚುನಾವಣೆ ಅಭ್ಯರ್ಥಿಯಾಗಿ ಸೋಮವಾರ ಮತ ಯಾಚನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಎಂಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸಿದ್ದು, ಸಹಕಾರ ಕ್ಷೇತ್ರದ ಎಲ್ಲ ಮತದಾರರು ನನಗೆ ಮತ ನೀಡಬೇಕು. ಜಿಲ್ಲೆಯ ಸಹಕಾರ ಕ್ಷೇತ್ರ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಸರ್ಕಾರದಿಂದ ಸಹಕಾರ ಕ್ಷೇತ್ರಕ್ಕೆ ಬರುವ ಎಲ್ಲ ಸವಲತ್ತು ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ರೈತರ ಸಮಸ್ಯೆಗಳಿಗೆ ಸಕಾಲದಲ್ಲಿ ಸ್ಪಂದಿಸಿ ಅವರ ಸಮಸ್ಯೆ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ವಿ.ಚಂದ್ರು, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಕೆ.ರವಿಕುಮಾರ್, ಚಾಮರಾಜನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಎಪಿಎಂಸಿ ಅಧ್ಯಕ್ಷ ಪ್ರದೀಪ್, ಮಾಜಿ ಅಧ್ಯಕ್ಷ ನಾಗೇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಬ್ಚಹಳ್ಳಿ ಮಹೇಶ್, ಸದಸ್ಯ ಡಿ.ಕೆ.ಶಿವಕುಮಾರ್, ಪಿಎಸಿಸಿ ಬ್ಯಾಂಕ್ ಅಧ್ಯಕ್ಷ ಶಿವನಾಗಪ್ಪ, ಮುಖಂಡರಾದ ದೇಮಹಳ್ಳಿ ಶಿವಕುಮಾರ್, ಶಿವಮಲ್ಲಪ್ಪ, ಶ್ರೀಕಂಠಸ್ವಾಮಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.