ADVERTISEMENT

ಸ್ಮಾರ್ಟ್ ಆಂಬುಲೆನ್ಸ್ ಸೇವೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2025, 14:22 IST
Last Updated 6 ಜೂನ್ 2025, 14:22 IST
ಚಾಮರಾಜನಗರದ ಆರ್.ಕೆ.ಸೂಪರ್ ಸ್ಪೆಷಾಲಿಟಿ ಸೆಂಟರ್ ಮುಂಭಾಗದಲ್ಲಿ ಮೈಸೂರು ಅಪೋಲೊ ಬಿಜಿಎಸ್ ಆಸ್ಪತ್ರೆಯ 5ಜಿ ಇಂಟಿಗ್ರೇಟೆಡ್ ಸ್ಮಾರ್ಟ್ ಆಂಬುಲೆನ್ಸ್ ಸೇವೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಚಾಲನೆ ನೀಡಿದರು
ಚಾಮರಾಜನಗರದ ಆರ್.ಕೆ.ಸೂಪರ್ ಸ್ಪೆಷಾಲಿಟಿ ಸೆಂಟರ್ ಮುಂಭಾಗದಲ್ಲಿ ಮೈಸೂರು ಅಪೋಲೊ ಬಿಜಿಎಸ್ ಆಸ್ಪತ್ರೆಯ 5ಜಿ ಇಂಟಿಗ್ರೇಟೆಡ್ ಸ್ಮಾರ್ಟ್ ಆಂಬುಲೆನ್ಸ್ ಸೇವೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಚಾಲನೆ ನೀಡಿದರು   

ಚಾಮರಾಜನಗರ: ನಗರದ ಆರ್.ಕೆ ಸೂಪರ್ ಸ್ಪೆಷಾಲಿಟಿ ಸೆಂಟರ್ ಮುಂಭಾಗ ಮೈಸೂರು ಅಪೋಲೊ ಬಿಜಿಎಸ್ ಆಸ್ಪತ್ರೆಯ 5 ಜಿ ಇಂಟಿಗ್ರೇಟೆಡ್ ಸ್ಮಾರ್ಟ್ ಆಂಬುಲೆನ್ಸ್ ಸೇವೆಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಕ್ರವಾರ ಚಾಲನೆ ನೀಡಿದರು.

‘ಜಿಲ್ಲೆಯ ರೋಗಿಗಳು ಹೆಚ್ಚಿನ ಚಿಕಿತ್ಸೆಗೆ ಮೈಸೂರು ಜಿಲ್ಲೆಯ ಆಸ್ಪತ್ರೆಗಳನ್ನು ಅವಲಂಬಿಸಿದ್ದು ಈ ನಿಟ್ಟಿನಲ್ಲಿ ಆಪೋಲೊ ಆಸ್ಪತ್ರೆಯ 5 ಜಿ ಇಂಟಿಗ್ರೇಟೆಡ್ ಸ್ಮಾರ್ಟ್ ಆಂಬುಲೆನ್ಸ್ ಸೇವೆ ಹೆಚ್ಚು ಸಹಕಾರಿಯಾಗಲಿದೆ. ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿರುವ ಆಂಬುಲೆನ್ಸ್‌ನಲ್ಲಿ ರೋಗಿಗಳು ಉತ್ತಮ ಆರೋಗ್ಯ ಸೇವೆ ಪಡೆಯಬಹುದು. ಜಿಲ್ಲೆಯಲ್ಲೂ ಅಪೋಲೋ ಆಸ್ಪತ್ರೆಯ ಶಾಖೆ ಆರಂಭವಾದರೆ ಜನರಿಗೆ ಉತ್ತಮ ಆರೋಗ್ಯ ಸೇವೆ ಲಭ್ಯವಾಗಲಿದೆ’ ಎಂದರು.

ಎಂಎಸ್‌ಐಎಲ್ ವತಿಯಿಂದಲೂ 5ಜಿ ಇಂಟಿಗ್ರೇಟೆಡ್ ಸ್ಮಾರ್ಟ್ ಆಂಬುಲೆನ್ಸ್ ನೀಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಅಪೋಲೊ ಬಿಜಿಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅಮನ್ ನಾಯಕ್, ಡಾ.ಶಿವಕುಮಾರ್, ಡಾ.ರಿಚರ್ಡ್ ಪಿಕಾರ್ಡೊ ಮಾತನಾಡಿದರು. ನಗರಸಭಾ ಸದಸ್ಯ ಸ್ವಾಮಿ, ಮಾರುಕಟ್ಟೆ ವ್ಯವಸ್ಥಾಪಕ ವಿಜಯ್, ರಮೇಶ್, ಡಾ.ಕಿಶನ್ ಪಿಕಾರ್ಡೊ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.