ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರ ಅನುಕೂಲಕ್ಕಾಗಿ ಪ್ರಾಧಿಕಾರದಿಂದ ಕೈಗೆತ್ತಿಕೊಂಡಿರುವ ಅಭಿವೃದ್ಧಿ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕೆ.ವೆಂಕಟೇಶ್ ಅಧಿಕಾರಿಳಿಗೆ ಸೂಚಿಸಿದರು.
ಬೆಂಗಳೂರಿನ ವಿಕಾಸಸೌಧದಲ್ಲಿ ಮಲೆಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ‘₹ 45.85 ಕೋಟಿ ವೆಚ್ಚದಲ್ಲಿ ಮಲೆ ಮಹದೇಶ್ವರ ದೇವಸ್ಥಾನದ ಹಿಂಭಾಗ ಕೈಗೊಂಡಿರುವ ಸರತಿ ಸಾಲಿನ ಸಂಕೀರ್ಣ ನಿರ್ಮಾಣ ಕಾಮಗಾರಿ ಶೀಘ್ರ ಮುಗಿಯಬೇಕು, ಕಟ್ಟಡಕ್ಕೆ ಬಣ್ಣ ಬಳಿಯುವ, ಕಾರಿಡಾರ್‌ಗಳಿಗೆ ಗ್ರಾನೈಟ್ ಫ್ಲೋರಿಂಗ್ ಕಾಮಗಾರಿ ಪೂರ್ಣಗೊಳಿಸಬೇಕು. ಕ್ಷೇತ್ರದ ಆವರಣದಲ್ಲಿ ₹ 9.35 ಕೋಟಿ ವೆಚ್ಚದಲ್ಲಿ 6 ಕೂಡು ರಸ್ತೆಗಳ ಅಭಿವೃದ್ದಿ ಕಾಮಗಾರಿ ಪೂರ್ಣಗೊಳಿಸಬೇಕು. ದಾಸೋಹ ಭವನದ ಎದುರು ಶೌಚಾಲಯ ಹಾಗೂ ಸ್ನಾನ ಗೃಹ ನಿರ್ಮಾಣ ಕಾಮಗಾರಿ ವೇಗವಾಗಬೇಕು, ಬಸ್ ನಿಲ್ದಾಣದ ಬಳಿ ಕೈಗೆತ್ತಿಕೊಂಡಿರುವ ಸ್ನಾನಗೃಹ, ಶೌಚಾಲಯ ನಿರ್ಮಾಣ ಕಾಮಗಾರಿ ಕೂಡ ತ್ವರಿತವಾಗಿ ಮುಗಿಯಬೇಕು’ ಎಂದರು.
‘ಭಕ್ತರ ವಾಸ್ತವ್ಯಕ್ಕಾಗಿ ನಿರ್ಮಾಣ ಹಂತದಲ್ಲಿರುವ ಡಾರ್ಮೆಟರಿ ಕಾಮಗಾರಿ ಕಾಲಮಿತಿಯೊಳಗೆ ಪೂರ್ಣಗೊಳಿಸಿ ಭಕ್ತರ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಡಬೇಕು. ದೀಪದಗಿರಿ ಒಡ್ಡುವಿನಲ್ಲಿ ಮಲೆಮಹದೇಶ್ವರಸ್ವಾಮಿ ಪ್ರತಿಮೆಯ ಹೊರ ಆವರಣದ ಸುತ್ತಲು ತಡೆಗೋಡೆ ನಿರ್ಮಾಣವಾಗಬೇಕು, ತಾಳಬೆಟ್ಟದಿಂದ ಮಲೆಮಹದೇಶ್ವರಸ್ವಾಮಿ ದೇವಸ್ಥಾನದವರೆಗಿನ ಕಾಲ್ನಡಿಗೆ ಮಾರ್ಗದಲ್ಲಿ ಮೆಟ್ಟಿಲುಗಳ ನಿರ್ಮಾಣ, ಬಾಕಿ ಮೂಲಸೌಕರ್ಯ ಕಾಮಗಾರಿ ಮುಗಿಸಬೇಕು’ ಎಂದು ಸಚಿವರು ಸೂಚನೆ ನೀಡಿದರು.
ಕಾಲಮಿತಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸೂಚನೆ ದಾಸೋಹ ಪ್ರಸಾದ ಭವನ ವಿಶಾಲವಾಗಿರಲು ಸಲಹೆ ಭಕ್ತರಿಗಾಗಿ ಡಾರ್ಮೆಟರಿ ನಿರ್ಮಾಣ
ಕ್ಷೇತ್ರದಲ್ಲಿರುವ ನಿರಾಶ್ರಿತರಿಗೆ ಪುನರ್ವಸತಿ ಕೇಂದ್ರದ ಅವಶ್ಯಕತೆ ಇದ್ದು ಸಮಾಜ ಕಲ್ಯಾಣ ಇಲಾಖೆಯ ಅನುದಾನದ ನೆರವು ಪಡೆದು ನಿರ್ಮಾಣ ಮಾಡಬೇಕಿದೆ. ಸುಸಜ್ಜಿತ ದಾಸೋಹ ಭವನಕ್ಕೆ ಪ್ರತ್ಯೇಕ ಜನರೇಟರ್ ಅಗತ್ಯವಿದೆಸಿ.ಟಿ.ಶಿಲ್ಪಾ ನಾಗ್ ಜಿಲ್ಲಾಧಿಕಾರಿ
‘ತ್ಯಾಜ್ಯ ವಿಲೇವಾರಿ ಘಟಕ ಇರಲಿ’ ‘ಉದ್ದೇಶಿತ ದಾಸೋಹ ಭವನದಲ್ಲಿ ವೈಜ್ಞಾನಿಕವಾದ ತ್ಯಾಜ್ಯ ವಿಲೇವಾರಿ ಘಟಕ ಇರಬೇಕು. ಅಡುಗೆಗೆ ಬಳಸಿದ ನಂತರ ಉಳಿಯುವ ತ್ಯಾಜ್ಯ ಸೂಕ್ತವಾಗಿ ವಿಲೇವಾರಿ ಮಾಡಬೇಕು ಜೈವಿಕ ಘಟಕ ನಿರ್ಮಾಣ ಮಾಡಿ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳು ತ್ವರಿತವಾಗಿ ಮುಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ವಿ.ವೆಂಕಟೇಶ್ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.