ಕೊಳ್ಳೇಗಾಲ: ತಾಲ್ಲೂಕಿನ ಕುಣಗಳ್ಳಿ ಗ್ರಾಮದ ದಂಡಿನ ಮಾರಮ್ಮ ದೇವಸ್ಥಾನದ ಹುಂಡಿಯನ್ನು ದುರ್ಷ್ಕಮಿಗಳು ಕಳವು ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಕೆರೆ ಪಕ್ಕದ ರಸ್ತೆಯಲ್ಲಿ ಹುಂಡಿಯನ್ನು ಬೀಸಾಡಿ ಹೋಗಿದ್ದಾರೆ.
ದೇವಸ್ಥಾನದಲ್ಲಿ ಹುಂಡಿಯಲ್ಲಿ ₹10 ರಿಂದ ₹15 ಸಾವಿರ ಹಣ ಇತ್ತು ಎಂದು ದೇವಸ್ಥಾನ ಆಡಳಿತ ಮಂಡಳಿಯವರು ದೂರು ಸಲ್ಲಿಸಿದ್ದಾರೆ. ವಿಚಾರ ತಿಳಿದ ಪಿಎಸ್ಐ ಕರಿಬಸಪ್ಪ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡು, ಕಳ್ಳರ ಪತ್ತೆಗೆ ಕ್ರಮ ಜರುಗಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.