ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ ಸಮೀಪ 20ಕ್ಕೂ ಹೆಚ್ಚು ಕೋತಿಗಳ ಕಳೇಬರ ಪತ್ತೆಯಾಗಿದ್ದು ಮೇಲ್ನೋಟಕ್ಕೆ ವಿಷಪ್ರಾಷನದಿಂದ ಕೋತಿಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ ಎರಡು ಚೀಲಗಳಲ್ಲಿ ಕೋತಿಗಳ ಕಳೇಬರವನ್ನು ತಂದು ಬಿಸಾಡಿ ಹೋಗಲಾಗಿದೆ.
ಇದನ್ನು ನೋಡಿದ ದಾರಿಹೋಕರು ಅರಣ್ಯ ಇಲಾಖೆ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ ಬಫರ್ ವಲಯದ ಡಿಆರ್‌ಎಫ್ಒ ಶಿವಕುಮಾರ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಕೋತಿಗಳಿಗೆ ವಿಷಪ್ರಾಶನ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದ್ದು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ವಿಷಪ್ರಾಶನದಿಂದ 5 ಹುಲಿಗಳು ಮೃತಪಟ್ಟ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲದಲ್ಲಿ ಕೋತಿಗಳ ಮಾರಣಹೋಮ ನಡೆದಿರುವುದು ವನ್ಯಜೀವಿ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ವಿಷವಿಕ್ಕಿ ವಿಕೃತಿ ಮೆರೆದವರನ್ನು ಬಂಧಿಸುವಂತೆ ಪರಿಸರವಾದಿ ಬಸವಣ್ಣ ಹಾಗೂ ಶಂಭು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.