ADVERTISEMENT

ಚಾಮರಾಜನಗರ: ಹೆಚ್ಚಿದ ಪರೀಕ್ಷೆ, ಹಿಗ್ಗಿದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 27 ಜುಲೈ 2021, 2:25 IST
Last Updated 27 ಜುಲೈ 2021, 2:25 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ 1,912 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 37 ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ ಒಂದು ಪ್ರಕರಣ ತಮಿಳುನಾಡಿನಲ್ಲಿ ಖಚಿತವಾಗಿದೆ. 22 ಮಂದಿ ಗುಣಮುಖರಾಗಿದ್ದಾರೆ. ಸಾವು ಸಂಭವಿಸಿಲ್ಲ.

ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 226ಕ್ಕೆ ಏರಿದೆ. ಸೋಂಕಿತರ ಪೈಕಿ ಐಸಿಯುನಲ್ಲಿ 15 ಹಾಗೂ ಹೋಂ ಐಸೊಲೇಷನ್‌ನಲ್ಲಿ 25 ಜನರಿದ್ದಾರೆ. ಉಳಿದವರು ಆಸ್ಪತ್ರೆ ಹಾಗೂ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಮವಾರದ ಅಂಕಿ ಅಂಶಗಳೊಂದಿಗೆ ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 31,728ಕ್ಕೆ ಏರಿದೆ. 30,976 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ ಈವರೆಗೆ 567 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.

ADVERTISEMENT

ಸೋಮವಾರ ಒಟ್ಟು 40 ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಎರಡು ಪ್ರಕರಣಗಳು ಬೇರೆ ಜಿಲ್ಲೆಗೆ ಸೇರಿದವು. ಇನ್ನೆರಡು ಪ್ರಕರಣಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದು ಜಿಲ್ಲಾಡಳಿತ ತನ್ನ ವರದಿಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.