ಗುಂಡ್ಲುಪೇಟೆ: ಪುರಸಭೆ ಮುಖ್ಯಾಧಿಕಾರಿ ಕೆ.ಪಿ.ವಸಂತಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರನ್ನು ಶಿವಮೊಗ್ಗ ಮಹಾನಗರ ಪಾಲಿಕೆಯ ಎಸ್ಟೇಟ್ ಆಫೀಸರ್ ಹುದ್ದೆಗೆ ಸರ್ಕಾರ ನಿಯೋಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಎರಡು ವರ್ಷದಿಂದ ಗುಂಡ್ಲುಪೇಟೆ ಪಟ್ಟಣ ಪುರಸಭೆ ಮುಖ್ಯಾಧಿಕಾರಿಯಾಗಿ ಅವರು ಕೆಲಸ ಮಾಡುತ್ತಿದ್ದರು. ಎರಡು ತಿಂಗಳ ಹಿಂದೆಯೇ ವಸಂತಕುಮಾರಿ ಅವರನ್ನು ವರ್ಗಾವಣೆ ಮಾಡಲಾಗಿತ್ತು, ತಮ್ಮ ಅವಧಿ ಮುಕ್ತಾಯಗೊಳ್ಳುವ ಮುನ್ನವೇ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಅವರು ಕೆಎಟಿ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.