ಯಳಂದೂರು: ಪೌರ ಕಾರ್ಮಿಕರು ಸ್ವಚ್ಛತೆಯ ರಾಯಭಾರಿಗಳು. ಇವರ ಸೇವೆಗೆ ಬೆಲೆ ಕಟ್ಟಲಾಗದು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಅಭಿಪ್ರಾಯಪಟ್ಟರು.
ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಗಳವಾರ ಪಟ್ಟಣ ಪಂಚಾಯಿತಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಕಾರ್ಮಿಕರ ದಿನಚರಿ ಮುಂಜಾನೆಯಿಂದ ಆರಂಭವಾಗುತ್ತದೆ. ಆಯಾ ನಗರ ಮತ್ತು ಪಟ್ಟಣಗಳ ಸೌಂದರ್ಯ ಹೆಚ್ಚಿಸಲು, ಆರೋಗ್ಯಕರ ಪರಿಸರ ನಿರ್ಮಿಸಲು ಇವರು ಶ್ರಮಿಸಬೇಕಿದೆ. ಇವರಿಗೆ ನೆರವಾಗುವ ದೃಷ್ಟಿಯಲ್ಲಿ ಸಾರ್ವಜನಿಕರು ಹಸಿ ಮತ್ತು ಒಣಕಸ ವಿಂಗಡಿಸಿ ನೀಡಬೇಕು. ಅನುಪಯುಕ್ತ ಕಸ ಮತ್ತು ಅಪಾಯಕಾರಿ ತ್ಯಾಜ್ಯ ನೀಡುವಾಗ ಎಚ್ಚರ ವಹಿಸಬೇಕು’ ಎಂದರು.
‘ಸರ್ಕಾರ ಪೌರ ಕಾರ್ಮಿಕರ ಕಲ್ಯಾಣಕ್ಕೆ ಹಲವಾರು ಸವಲತ್ತು ನೀಡುತ್ತದೆ. ಕಾರ್ಮಿಕರ ಸಂಖ್ಯೆ ಆಧಾರದ ಮೇಲೆ ಮೂಲ ಸೌಲಭ್ಯ ನೀಡುತ್ತದೆ. ಇವುಗಳನ್ನು ಬಳಸಿಕೊಂಡು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಕುಟುಂಬದ ಸದಸ್ಯರು ಆರೋಗ್ಯ ತಪಾಸಣೆಯತ್ತಲೂ ಗಮನ ಹರಿಸಬೇಕು’ ಎಂದು ಸಲಹೆ ನೀಡಿದರು.
ಅಧ್ಯಕ್ಷೆ ಲಕ್ಷ್ಮಿ, ಉಪಾಧ್ಯಕ್ಷೆ ಶಾಂತಮ್ಮ, ಸದಸ್ಯರಾದ ಮಹೇಶ್, ರಂಗನಾಥ, ಸವಿತಾ, ಮಹದೇವ, ಮಂಜು, ಪ್ರಭಾವತಿ ರಾಜಶೇಖರ್, ಬಿ.ರವಿ, ಸುಶೀಲಾಪ್ರಕಾಶ್, ಲಿಂಗರಾಜಮೂರ್ತಿ, ಶ್ರೀಕಂಠಸ್ವಾಮಿ, ಮುನವ್ವರ್‌ಬೇಗ್ ಮುಖ್ಯಾಧಿಕಾರಿ ಎಂ.ಪಿ.ಮಹೇಶ್‌ಕುಮಾರ್, ಆರೋಗ್ಯ ನಿರೀಕ್ಷಕ ರಘು, ಗುತ್ತಿಗೆದಾರ ರಮೇಶ್, ಮಲ್ಲಿಕಾರ್ಜುನ, ರಘು ಹಾಗೂ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.