
ಪ್ರಜಾವಾಣಿ ವಾರ್ತೆ
ಚಾಮರಾಜನಗರ: ಮೈಸೂರಿನಿಂದ ಚಾಮರಾಜನಗರಕ್ಕೆ ಬರುವ ಮತ್ತು ಹೋಗುವ ಎಲ್ಲ ರೈಲುಗಳನ್ನು ರೈಲ್ವೆ ಇಲಾಖೆ ಸ್ಥಗಿತಗೊಳಿಸಿದೆ. ಇದರಿಂದ ತುರ್ತು ಕಾರಣಗಳಿಗಾಗಿ ಮೈಸೂರಿಗೆ ತೆರಳುವ ಸಾರ್ವಜನಿಕರು ಗುರುವಾರ ಪರದಾಡಿದರು.
‘ಕೆಲವೇ ಕೆಲವು ಮಂದಿಯಷ್ಟೇ ರೈಲಿನಲ್ಲಿ ಪ್ರಯಾಣ ಮಾಡುತ್ತಿರುವುದರಿಂದ ನಷ್ಟ ಉಂಟಾಗುತ್ತಿತ್ತು. ಹಾಗಾಗಿ, ಚಾಮರಾಜನಗರಕ್ಕೆ ಬರುವ ಎಲ್ಲ ರೈಲುಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ’ ಎಂದು ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.