ADVERTISEMENT

ಕೊಳ್ಳೇಗಾಲ: ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 2:34 IST
Last Updated 17 ಅಕ್ಟೋಬರ್ 2025, 2:34 IST
ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು
ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕೊಳ್ಳೇಗಾಲ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು   

ಕೊಳ್ಳೇಗಾಲ: ಮೈಸೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ಇಲ್ಲಿನ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು. ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಆರೋಪಿಗೆ ತಕ್ಷಣವೇ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.

ನಗರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಘೋಷಣೆಯೊಂದಿಗೆ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿಗೆ ತೆರಳಿ, ಗ್ರೇಡ್–2 ತಹಶೀಲ್ದಾರ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

ನಂತರ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಶಬ್ಬೀರ್ ಪಾಷ ಮಾತನಾಡಿ, ದೇಶದಲ್ಲಿ ಬಾಲಕಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯವು ಅತ್ಯಂತ ವಿಷಾದನೀಯ. ಮೈಸೂರಿನಲ್ಲಿ ಇಂತಹ ಘಟನೆ ನಡೆದಿರುವುದು ನಿಜಕ್ಕೂ ದುರಂತದ ವಿಷಯವಾಗಿದೆ. ಅದರಲ್ಲೂ ಹೆಚ್ಚಾಗಿ ಕರ್ನಾಟಕ ಭಾಗದಲ್ಲಿ ಅತ್ಯಾಚಾರಗಳು ಸೇರಿದಂತೆ ಕೊಲೆ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಹಾಗಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಇದನ್ನು ಬಗ್ಗೆ ಗಂಭೀರವಾಗಿ ಪರಿಗಣಿಸಿ ಮಹಿಳೆಯರಿಗೆ ಮಕ್ಕಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಒಂದು ವೇಳೆ ಕಾನೂನು ಸುವ್ಯವಸ್ಥೆಯನ್ನು ಸರಿಪಡಿಸದೆ ಹೋದರೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಾಗಿ ಇಂತಹ ಘಟನೆಗಳು ನಡೆಯುವುದರಲ್ಲಿ ಅನುಮಾನವೇ ಇಲ್ಲ. ಹಾಗಾಗಿ ನಮಗೆ ಪೊಲೀಸ್ ಇಲಾಖೆ ಮೇಲೆ ಅಪಾರವಾದ ನಂಬಿಕೆ ಇದೆ, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಬೇಕು. ಅದರಲ್ಲೂ ಹೆಚ್ಚಾಗಿ ರಾತ್ರಿ ಸಮಯ ಪೊಲೀಸರು ಹೆಚ್ಚು ಗಸ್ತು ಮಾಡಬೇಕು ಎಂದು ಆಗ್ರಹಿಸಿದರು.  

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಉಪಾಧ್ಯಕ್ಷ ಪ್ರದೀಪ್ ಕುಮಾರ್, ತಾಲ್ಲೂಕು ಅಧ್ಯಕ್ಷ ಅಜ್ಗರ್ ಪಾಷ, ಉಪಾಧ್ಯಕ್ಷ ವಜಾಹತ್, ಜಿಲ್ಲಾ ಕಾರ್ಯದರ್ಶಿ ಮುಬಾರಕ್ ಅಹಮ್ಮದ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಭಾಗ್ಯ, ಕಾರ್ಯದರ್ಶಿ ರಾಧ, ಪ್ರಧಾನ ಕಾರ್ಯದರ್ಶಿ ನಾಗವೇಣಿ, ಮಹಿಳಾ ಮುಖ್ಯಸ್ಥೆ ಶೋಭ, ಸದಸ್ಯರು ಸಿ. ಪ್ರಸಾದ್, ಸುದೀಪ್, ಇಮ್ರಾನ್ ಪಾಷ, ರೋಷನ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.