ADVERTISEMENT

ಕೋವಿಡ್‌ ಹೆಚ್ಚಳ: ಸಂಪೂರ್ಣ ಲಾಕ್‌ಡೌನ್‌ಗೆ ಶಾಸಕ ಮಹೇಶ್‌ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಮೇ 2021, 7:47 IST
Last Updated 7 ಮೇ 2021, 7:47 IST
ಎನ್.ಮಹೇಶ್
ಎನ್.ಮಹೇಶ್   

ಚಾಮರಾಜನಗರ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಲ್ಬಣಿಸುತ್ತಿರುವ ಕೊರೊನಾ ಸೋಂಕು ತಡೆಯಲು 15 ದಿನಗಳ ಕಾಲ ಸಂಪೂರ್ಣ ಲಾಕ್‌ಡೌನ್ ಮಾಡಬೇಕು ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎನ್.ಮಹೇಶ್ ಇಲ್ಲಿ ಒತ್ತಾಯಿಸಿದರು.

ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬಗಳಿಗೆ ಪಡಿತರದ ಜತೆಗೆ ನಿತ್ಯ ₹ 300 ರಂ‌ತೆ ಒಟ್ಟು ₹ 5,000 ಸಹಾಯಧನ ವಿತರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ ಅಂತರಜಿಲ್ಲಾ ಮತ್ತು ಅಂತರರಾಜ್ಯ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು ಹಾಗೂ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರಬಾರದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.